3 ರಾಜ್ಯಗಳ 4 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ: ಮತದಾನ ಪ್ರಕ್ರಿಯೆ ಆರಂಭ
ದೆಹಲಿ, ಗೋವಾ ಮತ್ತು ಆಂಧ್ರಪ್ರದೇಶ ಮೂರು ರಾಜ್ಯಗಳ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಶಾಸಕರ ಆಯ್ಕೆಗಾಗಿ ಬುಧವಾರ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ...

Published On :
ನವದೆಹಲಿ: ದೆಹಲಿ, ಗೋವಾ ಮತ್ತು ಆಂಧ್ರಪ್ರದೇಶ ಮೂರು ರಾಜ್ಯಗಳ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಶಾಸಕರ ಆಯ್ಕೆಗಾಗಿ ಬುಧವಾರ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.
ಆಂಧ್ರಪ್ರದೇಶದ ನಂದ್ಯಾಲ, ಗೋವಾದ ಪಣಜಿ ಮತ್ತು ವಲ್ಪೋಯ್, ರಾಜಧಾನಿ ದೆಹಲಿ ಬವಾನಾ ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ಆಂಧ್ರಪ್ರದೇಶದ ನಂದ್ಯಾಲ ಕ್ಷೇತ್ರದ ತೆಲುಗು ದೇಶಂ ಪಕ್ಷದ ಶಾಸಕರು ಹೃದಯ ಸ್ತಂಭನದಿಂದಾಗಿ ವಿಧಿವಶರಾಗಿದ್ದರು. ಈ ಹಿನ್ನಲೆಯಲ್ಲಿ ನಂದ್ಯಾಲ ಕ್ಷೇತ್ರಕ್ಕೆ ಶಾಸಕರ ಆಯ್ಕೆಗಾಗಿ ಉಪಚುನಾವಣೆಯನ್ನು ನಡೆಸಲಾಗುತ್ತಿದೆ. ಇನ್ನು ದೆಹಲಿಯ ಬವಾನಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ವೇದ್ ಪ್ರಕಾಶ್ ಅವರು ಕಳೆದ ಮಾರ್ಚ್ ತಿಂಗಳಿನಲ್ಲಿ ಪಕ್ಷಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರಿದ್ದರಿಂದಾಗಿ ಈ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ.
ಇನ್ನು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಗೋವಾ ಮುಖ್ಯಮಂತ್ರಿಯಾಗಿರುವುದರಿಂದ 6 ತಿಂಗಳಿನಲ್ಲಿ ಅವರು ಶಾಸಕರಾಗಬೇಕಿದೆ. ಹೀಗಾಗಿ ಪಣಜಿ ಶಾಸಕ ಸಿದ್ಧಾರ್ಥ್ ಕುನ್ಕೋಲಿಯೆನ್ಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪಣಜಿಗೆ ಉಪಚುನಾವಣೆ ಬರುವಂತೆ ಮಾಡಿದ್ದರು.
ಇದರಂತೆ ಪಣಜಿ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಪರಿಕ್ಕರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇಂದು ಬೆಳಿಗ್ಗೆ ಮತ ಚಲಾಯಿಸಿರುವ ಪರಿಕ್ಕರ್ ಅವಲು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗೋವಾದ ಮತ್ತೊಂದು ಕ್ಷೇತ್ರ್ ವಲ್ಪೋಯ್ ನ ಶಾಸಕ ರಾನೆಯವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರಿಂದಾಗಿ ಉಪಚುನಾವಣೆ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


