7 ಪಾಕಿಸ್ತಾನ ಕೈದಿಗಳನ್ನು ಬಿಡುಗಡೆ ಮಾಡಿದ ಭಾರತ
ಮಹತ್ವದ ಬೆಳವಣಿಗೆಯೊಂದರಲ್ಲಿ ಶಿಕ್ಷೆಯ ಅವಧಿ ಮುಗಿಸಿದ 7 ಪಾಕಿಸ್ತಾನದ ಕೈದಿಗಳನ್ನು ಭಾರತ ಬಿಡುಗಡೆ ಮಾಡಿದ್ದು, ವಾಘಾ ಗಡಿ ಮೂಲಕ ಎಲ್ಲಾ ಕೈದಿಗಳು ತಮ್ಮ ತಾಯ್ನಾಡಿಗೆ ತೆರಳಿದ್ದಾರೆಂದು ಬುಧವಾರ ತಿಳಿದುಬಂದಿದೆ...

Published On :
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಶಿಕ್ಷೆಯ ಅವಧಿ ಮುಗಿಸಿದ 7 ಪಾಕಿಸ್ತಾನದ ಕೈದಿಗಳನ್ನು ಭಾರತ ಬಿಡುಗಡೆ ಮಾಡಿದ್ದು, ವಾಘಾ ಗಡಿ ಮೂಲಕ ಎಲ್ಲಾ ಕೈದಿಗಳು ತಮ್ಮ ತಾಯ್ನಾಡಿಗೆ ತೆರಳಿದ್ದಾರೆಂದು ಬುಧವಾರ ತಿಳಿದುಬಂದಿದೆ.
ಪಾಕಿಸ್ತಾನ ನ್ಯಾಯಾಲಯದಿಂದ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ವಿಚಾರ ಹಾಗೂ ಗಡಿಯಲ್ಲಿ ಉದ್ವಿಗ್ನ ವಾತಾವರಣ ಮುಂದುವರೆದಿರುವ ಮಧ್ಯೆಯೇ ಭಾರತ ಪಾಕಿಸ್ತಾನದ 7 ಕೈದಿಗಳನ್ನು ಬಿಡುಗಡೆ ಮಾಡಿದೆ.
ಪ್ರಸಕ್ತ ವರ್ಷದಲ್ಲಿ 295 ಮೀನುಗಾರರು ಸೇರಿದಂತೆ ಒಟ್ಟು 300 ಭಾರತೀಯ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಮಾನವೀಯತೆಯ ವಿಚಾರಗಳಿಗೆ ಭಾರತ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ಶಿಕ್ಷೆಯ ಅವಧಿ ಮುಗಿಸಿದ 7 ಪಾಕಿಸ್ತಾನದ ಕೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ. 7 ಕೈದಿಗಳೂ ಪಾಕಿಸ್ತಾನ ಮೂಲದವರೇ ಎಂಬುದು ಖಚಿತವಾಗಿದ್ದು, ಅವರನ್ನು ಅಟ್ಟಾರಿ-ವಾಘಾ ಗಡಿ ಮೂಲಕ ಪಾಕಿಸ್ತಾನಕ್ಕೆ ಕಳುಹಿಸಲಾಗುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


