ದೇಶ

ರೈಲು ಅಪಘಾತಗಳಿಂದ ಮನನೊಂದು ರಾಜೀನಾಮೆಗೆ ಮುಂದಾದ ರೈಲ್ವೆ ಸಚಿವ ಸುರೇಶ್ ಪ್ರಭು; ಪ್ರಧಾನಿ ತಡೆ!

ಉತ್ಕಲ್ ಎಕ್ಸ್ ಪ್ರೆಸ್ ರೈಲು ಅಪಘಾತ ಸೇರಿದಂತೆ ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ರೈಲು ಅಪಘಾತಗಳಿಂದ ಮನನೊಂದಿರುವ...

ರೈಲು ಅಪಘಾತಗಳಿಂದ ಮನನೊಂದು ರಾಜೀನಾಮೆಗೆ ಮುಂದಾದ ರೈಲ್ವೆ ಸಚಿವ ಸುರೇಶ್ ಪ್ರಭು; ಪ್ರಧಾನಿ ತಡೆ!
ಸುರೇಶ್ ಪ್ರಭು
Published On :
ನವದೆಹಲಿ: ಕೆಲವು ದಿನಗಳ ಹಿಂದೆ ನಡೆದ ಉತ್ಕಲ್ ಎಕ್ಸ್ ಪ್ರೆಸ್ ರೈಲು ಅಪಘಾತದ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದ್ದು, ಕೈಫಿಯತ್ ಎಕ್ಸ್'ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ 74 ಮಂದಿ ಗಾಯಗೊಂಡಿದ್ದು, ಮನನೊಂದಿರುವ ಸಚಿವ ಸುರೇಶ್ ಪ್ರಭು ರಾಜೀನಾಮೆ ನೀಡಲು ಮುಂದಾಗಿದ್ದಾರೆ. 
ರಾಜೀನಾಮೆ ನೀಡಲು ನಿರ್ಧರಿಸಿರುವ ಬಗ್ಗೆ ಸ್ವತಃ ಸುರೇಶ್ ಪ್ರಭು ಟ್ವೀಟ್ ಮಾಡಿದ್ದು ಸ್ಪಷ್ಟಪಡಿಸಿದ್ದಾರೆ. ಸರಣಿ ರೈಲು ಅಪಘಾತಗಳಿಂದ ಮನನೊಂದು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸ್ವಲ್ಪದಿನ ಕಾಯುವಂತೆ ಸೂಚನೆ ನೀಡಿದ್ದಾರೆ ಎಂದು ಸುರೇಶ್ ಪ್ರಭು ಟ್ವೀಟ್ ಮಾಡಿದ್ದಾರೆ. 
"ಕಳೆದ 3 ವರ್ಷಗಳಲ್ಲಿ ನಾನು ರೈಲ್ವೆ ಇಲಾಖೆಯ ಅಭಿವೃದ್ಧಿ, ಆಧುನೀಕರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶ್ರಮಿಸಿದ್ದೇನೆ, ದಶಕಗಳ ನಿರ್ಲಕ್ಷ್ಯಗಳನ್ನು ಸರಿಪಡಿಸಲು ಯತ್ನಿಸಿದ್ದೇನೆ. ಇದೇ ಮಾರ್ಗದಲ್ಲಿ ರೈಲ್ವೆ ಇಲಾಖೆ ಅಭಿವೃದ್ಧಿಯೂ ಆಗುತ್ತಿದೆ ಎಂದು ಭರವಸೆಯನ್ನೂ ನೀಡುತ್ತೇನೆ. ಆದರೆ ಇತ್ತೀಚಿನ ದಿನಗಳಲ್ಲಿ ನಡೆದ ಸರಣಿ ಅಪಘಾತಗಳಿಂದ ಉಂಟಾದ ಸಾವು-ನೋವುಗಳಿಂದ ಮನಸ್ಸಿಗೆ ನೋವುಂಟಾಗಿದೆ. ಆದ್ದರಿಂದ ಹೊಣೆಹೊತ್ತು ರಾಜೀನಾಮೆ ನೀಡಲು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದೆ. ಆದರೆ ಇನ್ನೂ ಸ್ವಲ್ಪ ದಿನ ಕಾಯುವಂತೆ ಪ್ರಧಾನಿ ಸೂಚಿಸಿದ್ದಾರೆ ಎಂದು ಸುರೇಶ್ ಪ್ರಭು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.