ದೇಶ

ಮುಗಿಯದ ಎಐಎಡಿಎಂಕೆ ಬಿಕ್ಕಟ್ಟು: ಟಿಟಿವಿ ದಿನಕರನ್ ಬೆಂಬಲಿಗ ಶಾಸಕರಿಂದ ಸಿಎಂ ಬದಲಾವಣೆಗೆ ಪಟ್ಟು

ತಮಿಳುನಾಡು ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಆಡಳಿತರೂಢ ಎಐಎಡಿಎಂಕೆಯ ಎರಡೆಲೆಯ ಎರಡು ಬಣಗಳು ವಿಲೀನವಾದ....

ಮುಗಿಯದ ಎಐಎಡಿಎಂಕೆ ಬಿಕ್ಕಟ್ಟು: ಟಿಟಿವಿ ದಿನಕರನ್ ಬೆಂಬಲಿಗ ಶಾಸಕರಿಂದ ಸಿಎಂ ಬದಲಾವಣೆಗೆ ಪಟ್ಟು
ಪಿ ವೆಟ್ರಿವೇಲ್
Published On :
ಚೆನ್ನೈ: ತಮಿಳುನಾಡು ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಆಡಳಿತರೂಢ ಎಐಎಡಿಎಂಕೆಯ ಎರಡೆಲೆಯ ಎರಡು ಬಣಗಳು ವಿಲೀನವಾದ ಬೆನ್ನಲ್ಲೇ ಈಗ ಮತ್ತೊಂದು ಬಣ ಹುಟ್ಟಿಕೊಂಡಿದ್ದು, ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಅವರನ್ನು ಬದಲಾಯಿಸಬೇಕು ಎಂದು ಗುರುವಾರ ಆಗ್ರಹಿಸಿದೆ.
ಸೋಮವಾರವಷ್ಟೇ ಮುಖ್ಯಮಂತ್ರಿ ಪಳನಿಸ್ವಾಮಿ ಬಣ ಹಾಗೂ ಮಾಜಿ ಮುಖ್ಯಮಂತ್ರಿ ಓ ಪನ್ನೀರ್ ಸೇಲ್ವಂ ಬಣ ವಿಲೀನವಾಗಿತ್ತು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಬೆಂಬಲಿಗ ಶಾಸಕರು, ಪಳನಿಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಅವರ ಸ್ಥಾನಕ್ಕೆ ವಿಧಾನಸಭೆ ಸ್ಪೀಕರ್ ಪಿ ಧನಪಾಲ್ ಅವರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದಿನಕರನ್ ಬೆಂಬಲಿಗ ಶಾಸಕ ಪಿ ವೆಟ್ರಿವೇಲ್ ಅವರು, ಸ್ಥಾಪಿತ ಸರ್ಕಾರದ ವಿರುದ್ಧ ನಾವು ಮತ ಹಾಕುತ್ತೇವೆ ಎಂದು ಹೇಳಿಲ್ಲ. ಆದರೆ ಮುಖ್ಯಮಂತ್ರಿ ಪಳನಿಸ್ವಾಮಿ ಬದಲಾಯಿಸಬೇಕು ಎಂದು ಒತ್ತಾಯಿಸಿದ್ದೇವೆ ಎಂದಿದ್ದಾರೆ.
ನಿನ್ನೆಯಷ್ಟೇ ಟಿಟಿವಿ ದಿನಕರನ್ ಅವರು ಇ.ಕೆ.ಪಳನಿಸ್ವಾಮಿ ಸಂಪುಟದ ನಾಲ್ವರು ಸಚಿವರನ್ನು ಪಕ್ಷದ ಹುದ್ದೆಗಳಿಂದ ವಜಾ ಮಾಡಿದ್ದಾರೆ. ಅಲ್ಲದೆ ತೆರವಾದ ಪಕ್ಷದ ಹುದ್ದೆಗಳಿಗೆ ತಮಗೆ ನಿಷ್ಠರಾದ ಶಾಸಕರನ್ನು ನೇಮಕ ಮಾಡಿದ್ದಾರೆ. 
ಮತ್ತೊಂದು ಕಡೆ ಪುದುಚೇರಿಯ ರೆಸಾರ್ಟ್‌ ಒಂದರಲ್ಲಿ ವಾಸ್ತವ್ಯ ಹೂಡಿರುವ ದಿನಕರನ್‌ ಬೆಂಬಲಿಗ 19 ಶಾಸಕರು ಮುಖ್ಯಮಂತ್ರಿ ಪಳನಿಸ್ವಾಮಿ ರಾಜಿನಾಮೆ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.