ಆಂಧ್ರಪ್ರದೇಶ: ಟಿಡಿಪಿ. ವೈಎಸ್ಆರ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ
ವಿಧಾನಸಭೆ ಉಪ ಚುನಾವಣೆ ನಡೆದ ಮರುದಿನವೇ ನಂದ್ಯಾಲ್ ದಲ್ಲಿ ಆಡಳಿತರೂಢ ಟಿಡಿಪಿ ಮತ್ತು ಪ್ರತಿಪಕ್ಷ ವೈಎಸ್ ಆರ್ ಕಾಂಗ್ರೆಸ್...

Published On :
ನಂದ್ಯಾಲ್: ವಿಧಾನಸಭೆ ಉಪ ಚುನಾವಣೆ ನಡೆದ ಮರುದಿನವೇ ನಂದ್ಯಾಲ್ ದಲ್ಲಿ ಆಡಳಿತರೂಢ ಟಿಡಿಪಿ ಮತ್ತು ಪ್ರತಿಪಕ್ಷ ವೈಎಸ್ ಆರ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗುರುವಾರ ಘರ್ಷಣೆ ನಡೆದಿದ್ದು, ಈ ವೇಳೆ ಟಿಡಿಪಿ ನಾಯಕನ ಗನ್ ಮ್ಯಾನ್ ವೈಎಸ್ ಆರ್ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಾಯಗಳಾಗಿಲ್ಲ.
ಮೂಲಗಳ ಪ್ರಕಾರ, ಟಿಡಿಪಿ ನಾಯಕ ಅಭಿರುಚಿ ಮಧು ಹಾಗೂ ಅವರ ಬೆಂಬಲಿಗರು ಮತ್ತು ವೈಎಸ್ ಆರ್ ಕಾಂಗ್ರೆಸ್ ನಾಯಕಿ ಶಿಲ್ಪಾ ಚಕ್ರಪಾನಿ ರೆಡ್ಡಿ ಹಾಗೂ ಬೆಂಬಲಿಗರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಮಧು ಅವರ ಗನ್ ಮ್ಯಾನ್ ಗುಂಡು ಹಾರಿಸಿದ್ದಾರೆ.
ಟಿಡಿಪಿ ನಾಯಕರು ಶಿಲ್ಪಾ ಹತ್ಯೆಗೆ ಯತ್ಮಿಸಿದ್ದಾರೆ ಎಂದು ವೈಎಸ್ ಆರ್ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಆದರೆ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿರುವುದಾಗಿ ಟಿಡಿಪಿ ನಾಯಕರು ಹೇಳುತ್ತಿದ್ದಾರೆ.
ಗುಂಡು ಹಾರಿಸಿದ್ದರಿಂದ ಆಕ್ರೋಶಗೊಂಡ ವೈಎಸ್ ಆರ್ ಕಾಂಗ್ರೆಸ್ ಕಾರ್ಯಕರ್ತರು ಮಧು ಅವರ ಕಾರನ್ನು ಹಾನಿಗೊಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


