ಮೊಹರಂ ಹಿನ್ನೆಲೆ ದುರ್ಗಾ ಮೂರ್ತಿ ವಿಸರ್ಜನೆ ಮಾಡುವಂತಿಲ್ಲ: ಮಮತಾ ಬ್ಯಾನರ್ಜಿ
ಮೊಹರಂ ಆಚರಣೆಯ ದಿನದಂದು ದುರ್ಗಾ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆದೇಶಿಸಿದ್ದಾರೆ.

Published On :
ಕೋಲ್ಕತಾ: ಮೊಹರಂ ಆಚರಣೆಯ ದಿನದಂದು ದುರ್ಗಾ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆದೇಶಿಸಿದ್ದಾರೆ.
ಪಶ್ಚಿಮ ಬಂಗಾಳ ಸರ್ಕಾರ ಈ ಬಗ್ಗೆ ಅಧಿಕೃತ ಆದೇಶ ಪ್ರಕಟಿಸಿದ್ದು, ಸೆ.30 ರಿಂದ ಅ.1 ರ ವರೆಗೆ ಅಂದರೆ ಒಂದು ದಿನ ಮೊಹರಂ ಆಚರಣೆಯ ಮೆರವಣಿಗೆ ನಡೆಯುವ ಹಿನ್ನೆಲೆಯಲ್ಲಿ ದುರ್ಗಾ ಮೂರ್ತಿಗಳನ್ನು ವಿಸರ್ಜನೆ ಮಾಡುವಂತಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಅ.2 ರಿಂದ ಮೂರ್ತಿ ವಿಸರ್ಜನೆಗೆ ಅವಕಾಶವಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕಳೆದ ವರ್ಷವೂ ಮಮತಾ ಬ್ಯಾನರ್ಜಿ ಇಂಥಹದ್ದೇ ಆದೇಶ ನೀಡಿದ್ದರು ಆದರೆ ಮಮತಾ ಬ್ಯಾನರ್ಜಿ ಸರ್ಕಾರದ ಆದೇಶಕ್ಕೆ ಕಲ್ಕತ್ತಾ ಹೈಕೋರ್ಟ್ ತಡೆ ನೀಡಿತ್ತು. ಈ ಬಾರಿಯೂ ಸರ್ಕಾರದ ಆದೇಶದ ವಿರುದ್ಧ ಕೋರ್ಟ್ ಮೊರೆ ಹೋಗುವುದಾಗಿ ಬಿಜೆಪಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪಶ್ಚಿಮ ಬಂಗಾಳWest BengalMamata Banerjeeಮಮತಾ ಬ್ಯಾನರ್ಜಿದುರ್ಗಾ ಮೂರ್ತಿ ವಿಸರ್ಜನೆDusseraDurga idol immersion
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


