ದೇಶ

ರಾಜೀವ್ ಗಾಂಧಿ ಹಂತಕ ಪೆರಾರಿವಾಲನ್ ಗೆ ಪೆರೋಲ್

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲೊಬ್ಬರಾದ ಎಜಿ ಪೆರಾರಿವಾಲನ್ ಗೆ ಗುರುವಾರ ಪೆರೋಲ್ ಮಂಜೂರು ಮಾಡಲಾಗಿದೆ.

ರಾಜೀವ್ ಗಾಂಧಿ ಹಂತಕ ಪೆರಾರಿವಾಲನ್ ಗೆ ಪೆರೋಲ್
ಪೆರಾರಿವಾಲನ್
Published On :
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲೊಬ್ಬರಾದ ಎಜಿ ಪೆರಾರಿವಾಲನ್ ಗೆ ಗುರುವಾರ ಪೆರೋಲ್ ಮಂಜೂರು ಮಾಡಲಾಗಿದೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಸದ್ಯ ವೆಲ್ಲೋರ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪೆರಾರಿವಾಲನ್ ಗೆ ತಂದೆಯ ಚಿಕಿತ್ಸೆಗಾಗಿ 30 ದಿನಗಳ ಕಾಲ ಪೆರೋಲ್ ನೀಡಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಬಂಧನಕ್ಕೊಳಗಾದ ನಂತರ 26 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ರಾಜೀವ್ ಹಂತಕನಿಗೆ ಪೆರೋಲ್ ನೀಡಲಾಗಿದ್ದು, 1991ರಲ್ಲಿ ಪೆರಾರಿವಾಲನ್ ನನ್ನು ಪೊಲೀಸರು ಬಂಧಿಸಿದ್ದರು.
ವಯಸ್ಸಾದ, ಹಾಸಿಗೆ ಹಿಡಿದಿರುವ ತಂದೆಯನ್ನು ನೋಡಲು ಮಗನಿಗೆ ಪೆರೋಲ್ ನೀಡುವಂತೆ ಕೋರಿ ಪೆರಾರಿವಾಲನ್ ತಾಯಿ ಅರ್ಪುತಮ್ ಅಮ್ಮಾಳ್ ಅವರು ಹಲವು ಬಾರಿ ಮುಖ್ಯಮಂತ್ರಿಗಳ ವಿಶೇಷ ಘಟಕ್ಕೆ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.