ರಾಮ್ ರಹೀಮ್ ತೀರ್ಪು: ಹರ್ಯಾಣ, ಪಂಜಾಬ್ ರಾಜ್ಯಗಳು ಸ್ಥಬ್ದ!
ಬಾಬಾ ಗುರ್ಮಿತ್ ರಾಮ್ ರಹೀಮ್ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪು ಹೊರ ಬೀಳುತ್ತಿದ್ದಂತೆಯೇ ಪಂಜಾಬ್ ಮತ್ತು ಹರ್ಯಾಣ ರಾಜ್ಯಗಳು ಸ್ತಬ್ಧಗೊಂಡಿವೆ.

ಚಂಡೀಘಡ: ಬಾಬಾ ಗುರ್ಮಿತ್ ರಾಮ್ ರಹೀಮ್ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪು ಹೊರ ಬೀಳುತ್ತಿದ್ದಂತೆಯೇ ಪಂಜಾಬ್ ಮತ್ತು ಹರ್ಯಾಣ ರಾಜ್ಯಗಳು ಸ್ತಬ್ಧಗೊಂಡಿವೆ.
ಶುಕ್ರವಾರ ಸುಪ್ರೀಂ ಕೋರ್ಟ್ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರನ್ನು ದೋಷಿ ಎಂದು ತೀರ್ಪು ನೀಡುತ್ತಿದ್ದಂತೆಯೇ ಹರ್ಯಾಣ ಮತ್ತು ಪಂಜಾಬ್ ರಾಜಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂಟರ್ ನೆಟ್ ಮತ್ತು ವಿದ್ಯುತ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಅಂತೆಯೇ ಉಭಯ ರಾಜ್ಯಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸುಮಾರು 50 ಸಾವಿರಕ್ಕೂ ಅಧಿಕ ಮಂದಿ ಪೊಲೀಸರನ್ನು ಹಾಗೂ ಸೇನಾಪಡೆಗಳನ್ನು ನಿಯೋಜಿಸಲಾಗಿದೆ.
ಅಂತೆಯೇ ಉಭಯ ರಾಜ್ಯಗಳಲ್ಲಿ ರೈಲು ಸಂಚಾರ ಕೂಡ ಬಹುತೇಕ ಸ್ಥಬ್ದಗೊಂಡಿದ್ದು, ಸುಮಾರು 50 ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇನ್ನು ಹರ್ಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಿದ್ದು, ಅಘೋಷಿತ ರಜೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹಲವು ಕಾರ್ಖಾನೆಗಳು ಹಾಗೂ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ರಜೆ ಘೋಷಣೆ ಮಾಡಿವೆ ಎಂದು ತಿಳಿದುಬಂದಿದೆ.
ಪಂಚಕುಲ ಕೋರ್ಟ್ ಆವರಣದಲ್ಲಿ ಬಿಗುವಿನ ವಾತಾವರಣ
ಇತ್ತ ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಪಂಚಕುಲ ವಿಶೇಷ ಸಿಬಿಐ ಕೋರ್ಟ್ ನಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದ್ದು, ಕೋರ್ಟ್ ಆವರಣದಲ್ಲಿ ನೆರೆದಿರುವ ಸುಮಾರು 1 ಲಕ್ಷಕ್ಕೂ ಅಧಿಕ ಬಾಬಾ ಅನುಯಾಯಿಗಳು ಹಿಂಸಾಚಾರಕ್ಕೆ ಇಳಿದಿದ್ದು, ಪೊಲೀಸರು ಮತ್ತು ಸೇನಾಪಡೆಯ ಯೋಧರತ್ತ ಕಲ್ಲು ತೂರಾಟದಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ. ಸಕಲ ಸಿದ್ಧತೆ ನಡೆಸಿಕೊಂಡಿರುವ ಸೇನೆ ಕಲ್ಲು ತೂರಾಟದಾರರ ಮೇಲೆ ಸೈನಿಕರು ಅಶ್ರುವಾಯ ಪ್ರಯೋಗಿಸಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


