ದೇಶ

ಹಿಂಸಾಚಾರಕ್ಕೆ ಪಂಚಕುಲದಲ್ಲಿ 10 ಬಲಿ; ಪಂಜಾಬ್, ಹರ್ಯಾಣದ ಹಲವೆಡೆ ಕರ್ಫ್ಯೂ ಜಾರಿ

ಡೇರಾ ಸಚಾ ಸೌದ ಸಂಸ್ಥೆಯ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಪಂಚಕುಲಾದ ಸಿಬಿಐ ನ್ಯಾಯಾಲಯ ತೀರ್ಪು ನೀಡಿದ ಬೆನ್ನಲ್ಲೇ ಅವರ ಅನುಯಾಯಿಗಳು ಹಿಂಸಾಚಾರಕ್ಕಿಳಿದಿದ್ದು, ಪಂಚಕುಲದಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಹಿಂಸಾಚಾರಕ್ಕೆ ಪಂಚಕುಲದಲ್ಲಿ 10 ಬಲಿ; ಪಂಜಾಬ್, ಹರ್ಯಾಣದ ಹಲವೆಡೆ ಕರ್ಫ್ಯೂ ಜಾರಿ
ಹರ್ಯಾಣ, ಪಂಜಾಬ್ ನಲ್ಲಿ ಹಿಂಸಾಚಾರ
Published On :

ಚಂಡೀಘಡ: ಡೇರಾ ಸಚಾ ಸೌದ ಸಂಸ್ಥೆಯ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಪಂಚಕುಲಾದ ಸಿಬಿಐ ನ್ಯಾಯಾಲಯ ತೀರ್ಪು ನೀಡಿದ ಬೆನ್ನಲ್ಲೇ ಅವರ  ಅನುಯಾಯಿಗಳು ಹಿಂಸಾಚಾರಕ್ಕಿಳಿದಿದ್ದು, ಪಂಚಕುಲದಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪಂಚಕುಲಾದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ಆವರಣದಲ್ಲಿ ವ್ಯಾಪಕ ಹಿಂಸಾಚಾರ ನಡೆಯುತ್ತಿದ್ದು, 10ಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ. ಅಂತೆಯೇ ಸುಮಾರು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ  ನೂರಾರು ವಾಹನಗಳು ಜಖಂಗೊಂಡಿದ್ದು, ಶಾಸಗಿ ಸುದ್ದಿ ವಾಹಿನಿಗಳ ಮೂರು ಒಬಿ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಅಂತೆಯೇ ಹಲವು ಪತ್ರಕರ್ತರನ್ನು ಥಳಿಸಲಾಗಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಇದಲ್ಲದೆ ಪಂಜಾಬ್ ನ ಮಲೌಟ್ ರೇಲ್ವೇ ನಿಲ್ದಾಣದಲ್ಲೂ ವ್ಯಾಪಕ ಹಿಂಸಾಚಾರ ನಡೆಸಲಾಗಿದ್ದು, ರೇಲ್ವೇ ನಿಲ್ದಾಣಕ್ಕೆ ಬೆಂಕಿ ಹಚ್ಚಲಾಗಿದೆ. ಇದಲ್ಲದೆ ಸಮೀವದ ಪೆಟ್ರೋಲ್ ಬಂಕ್ ಮೇಲೂ ಉದ್ರಿಕ್ತರು ದಾಳಿ ಮಾಡಿದ್ದು, ಪೆಟ್ರೋಲ್  ಪಂಪ್ ಗೆ ಬೆಂಕಿ ಇಟ್ಟಿದ್ದಾರೆ. ಇಂತಹುದೇ ಮತ್ತೊಂದು ಪ್ರಕರಣ ಬಟಿಂಡಾದಲ್ಲೂ ಕೇಳಿಬಂದಿದೆ. ಘರ್ಷಣೆಯಲ್ಲಿ ಕಾರು ಬೈಕ್ ಸೇರಿ ಸುಮಾರು 100ಕ್ಕೂ ಹೆಚ್ಚು ವಾಹನಗಳು ಹಾನಿಗೀಡಾಗಿದ್ದು, ಹಲವು ವಾಹನಗಳಿಗೆ ಬೆಂಕಿ  ಹಚ್ಚಲಾಗಿದೆ.

ಐದು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ
ಬಾಬಾ ರಾಮ್ ರಹೀಮ್ ಸಿಂಗ್ ಅನುಯಾಯಿಗಳು ಹಿಂಸಾಚಾರಕ್ಕಿಳಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪಂಜಾಬ್‌ನ ಐದು ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿದೆ. ಪಂಜಾಬ್ ನ ಮುಕ್ತಸರ್, ಬಟಿಂಡಾ, ಮಾನಸಾ ಮತ್ತು  ಹರ್ಯಾಣದ ಸಿರ್ಸಾ ಸೇರಿದಂತೆ ಒಟ್ಟು 5 ಜಿಲ್ಲೆಗಳಲ್ಲಿ ಕರ್ಫೂ ಹೇರಲಾಗಿದೆ. ಘಟನಾ ಸ್ಥಳಗಳಿಗೆ ವ್ಯಾಪಕ ಸಂಖ್ಯೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗುತ್ತಿದೆ. ಡೇರಾ ಸಚ್ಚಾ ಸೌಧದಲ್ಲಿ 6ಕ್ಕೂ ಹೆಚ್ಚು ಸೇನಾ ಕಂಪನಿಗಳನ್ನು  ನಿಯೋಜಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.