ಆಂಧ್ರ ಪ್ರದೇಶ: ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಉಪ ರಾಷ್ಟ್ರಪತಿ
ಉಪ ರಾಷ್ಟ್ರಪತಿಯಾದ ನಂತರ ಮೊದಲ ಸಲ ತಮ್ಮ ತವರು ರಾಜ್ಯ ಆಂಧ್ರ ಪ್ರದೇಶಕ್ಕೆ...

Published On :
ಅಮರಾವತಿ(ಆಂಧ್ರ ಪ್ರದೇಶ): ಉಪ ರಾಷ್ಟ್ರಪತಿಯಾದ ನಂತರ ಮೊದಲ ಸಲ ತಮ್ಮ ತವರು ರಾಜ್ಯ ಆಂಧ್ರ ಪ್ರದೇಶಕ್ಕೆ ಇಂದು ಭೇಟಿ ಮಾಡಿದ ಎಂ.ವೆಂಕಯ್ಯ ನಾಯ್ಡು,ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸಿದರು. ಅವರ ಜೊತೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಕೂಡ ಇದ್ದರು.
ಈ ಯೋಜನೆಯಡಿ ಆಂಧ್ರ ಪ್ರದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವವರಿಗೆ ಸುಮಾರು 2,25,000 ಮನೆಗಳನ್ನು ನಿರ್ಮಿಸಲಾಗುವುದು.
ಉಪ ರಾಷ್ಟ್ರಪತಿ ಹುದ್ದೆ ತಮಗೆ ದೊರಕಿದ್ದು ಆಕಸ್ಮಿಕ. ತಮ್ಮ ಸ್ಥಾನಮಾನಕ್ಕೆ ತಕ್ಕಂತೆ ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.
ಕಠಿಣ ಶ್ರಮ ಮತ್ತು ಶಿಸ್ತು ತಮ್ಮ ಕೆಲಸದ ಅಜೆಂಡ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಂಧ್ರ ಪ್ರದೇಶandra pradeshಎಂ.ವೆಂಕಯ್ಯ ನಾಯ್ಡುಪ್ರಧಾನ ಮಂತ್ರಿ ಆವಾಸ್ ಯೋಜನೆM.Venkaiah NaiduPradhan Mantri Avas Yojana
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


