ದೇಶ

ರಾಮ್ ರಹೀಮ್ ಅತ್ಯಾಚಾರಿ: ತೀರ್ಪು ಪ್ರಕಟಿಸಿದ ನ್ಯಾಯಾಧೀಶರಿಗೆ ಭದ್ರತೆ ನೀಡಿ- ಹರಿಯಾಣ ಸರ್ಕಾರಕ್ಕೆ ಕೇಂದ್ರ

ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರನ್ನು ದೋಷಿ ಎಂದು ತೀರ್ಪು ಪ್ರಕಟಿಸಿದ್ದ ನ್ಯಾಯಾಧೀಶರಿಗೆ ಉನ್ನತ ಮಟ್ಟದಲ್ಲಿ ಭದ್ರತೆಯನ್ನು ಒದಗಿಸುವಂತೆ ಹರಿಯಾಣ ರಾಜ್ಯ ಸರ್ಕಾರಕ್ಕೆ...

ರಾಮ್ ರಹೀಮ್ ಅತ್ಯಾಚಾರಿ: ತೀರ್ಪು ಪ್ರಕಟಿಸಿದ ನ್ಯಾಯಾಧೀಶರಿಗೆ ಭದ್ರತೆ ನೀಡಿ- ಹರಿಯಾಣ ಸರ್ಕಾರಕ್ಕೆ ಕೇಂದ್ರ
ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್
Published On :
ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರನ್ನು ದೋಷಿ ಎಂದು ತೀರ್ಪು ಪ್ರಕಟಿಸಿದ್ದ ನ್ಯಾಯಾಧೀಶರಿಗೆ ಉನ್ನತ ಮಟ್ಟದಲ್ಲಿ ಭದ್ರತೆಯನ್ನು ಒದಗಿಸುವಂತೆ ಹರಿಯಾಣ ರಾಜ್ಯ ಸರ್ಕಾರಕ್ಕೆ ಕೇಂದ್ರ ಶನಿವಾರ ಸೂಚನೆ ನೀಡಿದೆ. 
2002ರಲ್ಲಿ ಗುರ್ತಿಮ್ ರಾಮ್ ರಹೀಮ್ ಅವರ ಆಶ್ರಮದಲ್ಲಿ ಇಬ್ಬರು ಮಹಿಳಾ ಭಕ್ತರ ಮೇಲೆ ಅತ್ಯಾಚಾರ ಮಾಡಿದ್ದ ಪ್ರಕರಣ ಸಂಬಂಧ ನಿನ್ನೆಯಷ್ಟೇ ಸುಪ್ರೀಂಕೋರ್ಟ್ ಮಹತ್ವದ ತೀರ್ಪನ್ನು ಪ್ರಕಟಿಸಿತ್ತು. ಪ್ರಕರಣದಲ್ಲಿ ದೇವಮಾನವ ರಾಮ್ ರಹೀಮ್ ದೋಷಿ ಎಂದು ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. 
ನ್ಯಾಯಾಲಯದ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಹರಿಯಾಣ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಹಿಂಸಾಚಾರದಲ್ಲಿ ಈ ವರೆಗೂ 32ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 250 ಮಂದಿ ಗಾಯಗೊಂಡಿದ್ದಾರೆ. 
ರಾಮ್ ರಹೀಮ್ ಅವರ ವಿರುದ್ಧ ತೀರ್ಪು ಪ್ರಕಟವಾಗಿರುವ ಹಿನ್ನಲೆಯಲ್ಲಿ ಇದೀಗ ಹರಿಯಾಣ ರಾಜ್ಯ ಹೊತ್ತು ಉರಿಯುತ್ತಿದ್ದು, ತೀರ್ಪು ಪ್ರಕಟಿಸಿದ್ದ ನ್ಯಾಯಾಧೀಶರ ಜೀವಕ್ಕೆ ಬೆದರಿಕೆಗಳಿರುವ ಹಿನ್ನಲೆಯಲ್ಲಿ ನ್ಯಾಯಾಧೀಶ ಜಗ್ದೀಪ್ ಸಿಂಗ್ ಅವರಿಗೆ ಉನ್ನತ ಮಟ್ಟದಲ್ಲಿ ಭದ್ರತೆಯನ್ನು ಒದಗಿಸುವಂತೆ ಹರಿಯಾಣ ಸರ್ಕಾರಕ್ಕೆ ಕೇಂದ್ರ ಸೂಚಿಸಿದೆ. 
ಗುಪ್ತಚರ ಮಾಹಿತಿಗಳನ್ನು ಆಧರಿಸಿ ನ್ಯಾಯಾಧೀಶಕರಿಗೆ ಕೇಂದ್ರೀಯ ಪಡೆಗಳಿಂದ ಭದ್ರತೆಗಳನ್ನು ನೀಡುವುದರ ಕುರಿತಂತೆ ಕೇಂದ್ರ ಗೃಹಸಚಿವಾಲಯ ಚಿಂತನೆ ನಡೆಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.