ಕೊಹ್ಲಿ, ವಿಜೇಂದರ್ ನನ್ನಿಂದಲೇ ಸಾಧನೆಯ ಶಿಖರವೇರಿರುವುದು: ಡೇರಾ ಮುಖ್ಯಸ್ಥ
ಡೇರಾ ಸಚ್ಚಾ ಸೌದಾ ಮುಖ್ಯಸ್ಥ, ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಂ ಸಿಂಗ್ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಪಂಚಕುಲಾ ಸಿಬಿಐ...

Published On :
ನವದೆಹಲಿ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ, ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಂ ಸಿಂಗ್ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಪಂಚಕುಲಾ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು ಇದೀಗ ಗುರ್ಮೀತ್ ಜೈಲು ಸೇರಿದ್ದಾರೆ.
ಈ ಮಧ್ಯೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಭಾರತದ ಸ್ಟಾರ್ ಬಾಕ್ಸರ್ ವಿಜೇಂದರ್ ಸಿಂಗ್ ಸೇರಿದಂತೆ ಖ್ಯಾತ ಕ್ರೀಡಾಪುಟಗಳಿಗೆ ಡೇರಾ ಮುಖ್ಯಸ್ಥರು ಮಾರ್ಗದರ್ಶನ ನೀಡಿರುವ ವರದಿಗಳು ಬಂದಿವೆ.
ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಮಾತನಾಡಿದ್ದ ಡೇರಾ ಮುಖ್ಯಸ್ಥರು, ತಾವು ತರಬೇತಿ ನೀಡಿರುವ ಕ್ರೀಡಾಪಟುಗಳು ಇಂದು ರಾಷ್ಟ್ರವನ್ನು ಪ್ರತಿನಿಧಿಸುತ್ತಿರುವುದಾಗಿ ಹೇಳಿದ್ದರು. ಬಾಕ್ಸರ್ ವಿಜೇಂದರ್ ಸಿಂಗ್ ದೇಶಕ್ಕಾಗಿ ಅನೇಕ ಪದಕಗಳನ್ನು ಗೆದ್ದಿದ್ದಾರೆ. ನಂತರ ವಿರಾಟ್ ಕೊಹ್ಲಿ ಸಹ ನನ್ನ ಮಾರ್ಗದರ್ಶನ ಪಡೆದಿದ್ದು ಇದೀಗ ಸಾಧನೆಯ ಶಿಖರವೇರಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅತ್ಯಾಚಾರHaryanaಹರ್ಯಾಣVirat Kohliವಿರಾಟ್ ಕೊಹ್ಲಿrape caseVijender Singhವಿಜೇಂದರ್ ಸಿಂಗ್RamRahim Verdictರಾಮ್ ರಹೀಮ್ ಸಿಂಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


