ದೇಶ

ಸಿರ್ಸಾದ ಡೇರಾ ಮುಖ್ಯ ಕಚೇರಿ ಪ್ರವೇಶ ಮಾಡುವ ಯಾವುದೇ ಯೋಜನೆ ಇಲ್ಲ: ಸೇನೆ

ಸಿರ್ಸಾದಲ್ಲಿರುವ ಡೇರಾ ಸಚ್ಚಾ ಸೌದ ಸಂಸ್ಥೆಯ ಮುಖ್ಯ ಕಚೇರಿಯನ್ನು ಪ್ರವೇಶ ಮಾಡುವ ಯಾವುದೇ ಯೋಜನೆ ತಕ್ಷಣಕ್ಕೆ....

ಸಿರ್ಸಾದ ಡೇರಾ ಮುಖ್ಯ ಕಚೇರಿ ಪ್ರವೇಶ ಮಾಡುವ ಯಾವುದೇ ಯೋಜನೆ ಇಲ್ಲ: ಸೇನೆ
ಮೇಜರ್ ಜನರಲ್ ರಾಜಪಾಲ್ ಪುನಿಯಾ
Published On :
ನವದೆಹಲಿ: ಸಿರ್ಸಾದಲ್ಲಿರುವ ಡೇರಾ ಸಚ್ಚಾ ಸೌದ ಸಂಸ್ಥೆಯ ಮುಖ್ಯ ಕಚೇರಿಯನ್ನು ಪ್ರವೇಶ ಮಾಡುವ ಯಾವುದೇ ಯೋಜನೆ ತಕ್ಷಣಕ್ಕೆ ಸೇನೆ ಮುಂದೆ ಇಲ್ಲ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ಶನಿವಾರ ಸ್ಪಷ್ಟಪಡಿಸಿದ್ದಾರೆ.
ಡೇರಾ ಮುಖ್ಯಸ್ಥ, ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾದ ನಂತರ ಸೇನೆ ಡೇರಾದ ಮುಖ್ಯ ಕಚೇರಿ ಪ್ರವೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೇಜರ್ ಜನರಲ್ ರಾಜಪಾಲ್ ಪುನಿಯಾ ಅವರು, ಡೇರಾ ಕ್ಯಾಂಪಸ್ ಪ್ರವೇಶಿಸುವ ಯಾವುದೇ ಯೋಜನೆ ಸದ್ಯಕ್ಕೆ ಸೇನೆ ಮುಂದೆ ಇಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಡೇರಾ ಮುಖ್ಯ ಕಚೇರಿಯ ಪ್ರವೇಶ ದ್ವಾರದಲ್ಲಿ ಮಾತ್ರ ಅರೆ ಸೇನಾಪಡೆ ಸಿಬ್ಬಂದಿ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ಆದರೆ ಸೇನೆ ಡೇರಾ ಕ್ಯಾಂಪಸ್ ಒಳಗೆ ನುಗ್ಗಿದೆ ಎಂಬುದು ಕೇವಲ ವದಂತಿ ಎಂದು ಪುನಿಯಾ ಅವರು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಕ್ಯಾಂಪಸ್ ತೊರೆಯುವಂತೆ ಡೇರಾ ವ್ಯವಸ್ಥಾಪಕರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.
ನಿನ್ನೆ ಗುರ್ಮಿತ್ ರಾಮ್ ರಹೀಮ್ ಸಿಂಗ್ ತಪ್ಪಿತಸ್ಥ ಎಂದು ಸಿಬಿಐ ವಿಶೇಷ ಕೋಟ್ ತೀರ್ಪು ನೀಡಿದ ನಂತರ ಪಂಚಕೂಲದಲ್ಲಿ ನಡೆದ ಹಿಂಸಾಚಾರದಲ್ಲಿ 32 ಮಂದಿ ಮೃತಪಟ್ಟಿದ್ದರು ಮತ್ತು 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.