ವ್ಯಾಪಕ ಹಿಂಸಾಚಾರದ ಬಳಿಕ ಸಹಜ ಸ್ಥಿತಿಯತ್ತ ಪಂಚಕುಲ!
ಗುರ್ಮಿತ್ ರಾಮ್ ರಹೀಮ್ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪು ಹೊರ ಬೀಳುತ್ತಿದ್ದಂತೆಯೇ ಹೊತ್ತಿ ಉರಿದಿದ್ದ ಪಂಚಕುಲ ಶನಿವಾರ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ.

ಚಂಢೀಘಡ: ಗುರ್ಮಿತ್ ರಾಮ್ ರಹೀಮ್ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪು ಹೊರ ಬೀಳುತ್ತಿದ್ದಂತೆಯೇ ಹೊತ್ತಿ ಉರಿದಿದ್ದ ಪಂಚಕುಲ ಶನಿವಾರ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ.
ರಾತ್ರಿ ಇಡೀ ಸೇನಾಪಡೆ ಯೋಧರು ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಪಹರೆ ನಡೆಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪಂಚಕುಲದಲ್ಲಿ ಅರೆಸೇನಾ ಪಡೆಯ 10 ತುಕಡಿಗಳನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ. ಇಂದು ಮುಂಜಾನೆಯಿಂದಲೇ ಜನ ತಮ್ಮ ತಮ್ಮ ಮನೆಗಳಿಂದ ಹೊರಬರುತ್ತಿದ್ದಾರೆ.
ಇನ್ನು ಘಟನಾ ಪ್ರದೇಶದಲ್ಲಿ ಇಂದೂ ನಿಷೇಧಾಜ್ಞೆ ಮುಂದುವರೆಸಲಾಗಿದ್ದು, ಪೊಲೀಸರು ಮತ್ತು ಭದ್ರತಾ ಪಡೆಗಳು ನಿರಂತರ ಪರೇಡ್ ಮಾಡುತ್ತಿದ್ದಾರೆ. ಅಂತೆಯೇ ಉಭಯ ರಾಜ್ಯಗಳ ನಡುವಿನ ರೈಲು ಸಂಚಾರ ಸ್ಥಗಿತವಾಗಿದ್ದು, ಈ ವರೆಗೂ ಸುಮಾರು 485 ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.
ಪಂಚಕುಲ ಡಿಸಿಪಿ ಅಮಾನತು
ಇನ್ನು ನಿನ್ನೆ ನಡೆದ ಹಿಂಸಾಚಾರ ಪ್ರಕರಣ ಸಂಬಂಧ ಪಂಚಕುಲ ಡಿಸಿಪಿ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪದ ಆರೋಪದ ಮೇರೆಗೆ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದ್ದು, ನಿನ್ನೆ ನಿಷೇಧಾಜ್ಞೆಯನ್ನು ಸಮರ್ಪಕವಾಗಿ ಜಾರಿಗೊಳಿಸದ ಹಿನ್ನಲೆಯಲ್ಲಿ ಇಂದು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


