ದೇಶ

ಹರಿಯಾಣ ಹಿಂಸಾಚಾರ ಬಹಳ ನೋವು ತಂದಿದೆ: ಪ್ರಧಾನಮಂತ್ರಿ ನರೇಂದ್ರ ಮೋದಿ

ಅತ್ಯಾಚಾರ ಪ್ರಕರಣ ಸಂಬಂಧ ಸ್ವಯಂ ಘೋಷಿತ ದೇವಮಾನ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರ ವಿರುದ್ಧ ತೀರ್ಪು ಪ್ರಕಟಗೊಂಡ ಬಳಿಕ ಹರಿಯಾಣ ರಾಜ್ಯ ಹೊತ್ತಿ ಉರಿಯುತ್ತಿದ್ದು, ಹಿಂಸಾಚಾರ ಬಹಳ ನೋವು ತಂದಿದೆ ಎಂದು ಪ್ರಧಾನಮಂತ್ರಿ...

ಹರಿಯಾಣ ಹಿಂಸಾಚಾರ ಬಹಳ ನೋವು ತಂದಿದೆ: ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Published On :
ನವದೆಹಲಿ: ಅತ್ಯಾಚಾರ ಪ್ರಕರಣ ಸಂಬಂಧ ಸ್ವಯಂ ಘೋಷಿತ ದೇವಮಾನ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರ ವಿರುದ್ಧ ತೀರ್ಪು ಪ್ರಕಟಗೊಂಡ ಬಳಿಕ ಹರಿಯಾಣ ರಾಜ್ಯ ಹೊತ್ತಿ ಉರಿಯುತ್ತಿದ್ದು, ಹಿಂಸಾಚಾರ ಬಹಳ ನೋವು ತಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ. 
ಹರಿಯಾಣ ರಾಜ್ಯ ಹಿಂಸಾಚಾರ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದಲ್ಲಿ ಎದುರಾಗಿರುವ ಹಿಂಸಾಚಾರದಿಂದ ಬಹಳ ನೋವಾಗಿದೆ. ಹಿಂಸಾಚಾರನ್ನು ತೀವ್ರವಾಗಿ ಖಂಡಿಸುತ್ತೇನೆ. ಪ್ರತೀಯೊಬ್ಬರೂ ಶಾಂತಿಯನ್ನು ಕಾಪಾಡಬೇಕಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕಿದೆ. ಎನ್ಎಸ್ಎ ಅಧಿಕಾರಿಗಳು ಹಾಗೂ ಗೃಹ ಕಾರ್ಯದರ್ಶಿಗಳಿಂದ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದೇನೆಂದು ಹೇಳಿದ್ದಾರೆ. 
ರಾಜ್ಯದಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಅಧಿಕಾರಿಗಳು ಗಡಿಯಾರದಂತೆ ಕೆಲಸ ಮಾಡಬೇಕಿದೆ. ಹಾಗೂ ಅಗತ್ಯ ಕ್ರಮ, ನೆರವು ಕಾರ್ಯಗಳನ್ನು ಕೈಗೊಳ್ಳಿ ಎಂದು ಸೂಚಿಸಿದ್ದಾರೆ.
2002ರಲ್ಲಿ ಗುರ್ತಿಮ್ ರಾಮ್ ರಹೀಮ್ ಅವರ ಆಶ್ರಮದಲ್ಲಿ ಇಬ್ಬರು ಮಹಿಳಾ ಭಕ್ತರ ಮೇಲೆ ಅತ್ಯಾಚಾರ ಮಾಡಿದ್ದ ಪ್ರಕರಣ ಸಂಬಂಧ ನಿನ್ನೆಯಷ್ಟೇ ಸುಪ್ರೀಂಕೋರ್ಟ್ ಮಹತ್ವದ ತೀರ್ಪನ್ನು ಪ್ರಕಟಿಸಿತ್ತು. ಪ್ರಕರಣದಲ್ಲಿ ದೇವಮಾನವ ರಾಮ್ ರಹೀಮ್ ದೋಷಿ ಎಂದು ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. 
ನ್ಯಾಯಾಲಯದ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಹರಿಯಾಣ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಹಿಂಸಾಚಾರದಲ್ಲಿ ಈ ವರೆಗೂ 32ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 250 ಮಂದಿ ಗಾಯಗೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.