ಬುದ್ಧ, ಗಾಂಧಿ ಹುಟ್ಟಿದ ಭೂಮಿ ನಮ್ಮದು, ಇಲ್ಲಿ ಯಾವುದೇ ರೂಪದ ಹಿಂಸಾಚಾರಕ್ಕೆ ಜಾಗವಿಲ್ಲ: ಪ್ರಧಾನಿ ಮೋದಿ
ಬುದ್ಧ, ಮಹಾತ್ಮಗಾಂಧಿ ಹಾಗೂ ಸರ್ದಾರ್ ಪಟೇಲರು ಹುಟ್ಟಿದ ಭೂಮಿ ಭಾರತವಾಗಿದ್ದು, ಯಾವುದೇ ರೂಪ ಹಿಂಸಾಚಾರ ಸ್ವೀಕಾರಾರ್ಹವಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ...

Published On :
ನವದೆಹಲಿ: ಬುದ್ಧ, ಮಹಾತ್ಮಗಾಂಧಿ ಹಾಗೂ ಸರ್ದಾರ್ ಪಟೇಲರು ಹುಟ್ಟಿದ ಭೂಮಿ ಭಾರತವಾಗಿದ್ದು, ಯಾವುದೇ ರೂಪ ಹಿಂಸಾಚಾರ ಸ್ವೀಕಾರಾರ್ಹವಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ.
ಜನಪ್ರಿಯ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್ ನ 35ನೇ ಆವೃತ್ತಿಯಲ್ಲಿ ದೇಶವಾಸಿಗಳನ್ನುದ್ದೇಶಿ ಮಾತನಾಡಿರುವ ಪ್ರಧಾನಿ ಮೋದಿಯವರು, ಮೊದಲ ಬಾರಿಗೆ ಡೆರಾ ಸಚ್ಛಾ ಸೌದಾ ಮುಖ್ಯಸ್ಥ ರಾಮ್ ರಹೀಮ್ ಸಿಂಗ್ ಅತ್ಯಾಚಾರ ತೀರ್ಪು ಸಂಬಂಧ ಹರಿಯಾಣದಲ್ಲಿ ಸೃಷ್ಟಿಯಾದ ಹಿಂಸಾಚಾರ ಪ್ರಕರಣ ಕುರಿತಂತೆ ಮೌನ ಮುರಿದು ಮಾತನಾಡಿದ್ದಾರೆ.
ದೈವದೂತ ಬುದ್ಧ, ಮಹಾತ್ಮ ಗಾಂಧಿ ಹಾಗೂ ಸರ್ದಾರ್ ಪಟೇಲರು ಹುಟ್ಟಿದಂತಹ ಭೂಮಿ ಭಾರತವಾಗಿದ್ದು, ಇಲ್ಲಿ ಯಾವುದೇ ರೂಪದ ಹಿಂಸಾಚಾರ ಸ್ವೀಕಾರಾರ್ಹವಲ್ಲ. ಅಹಿಂಸಾ ಪರಮೋ ಧರ್ಮ ನಮ್ಮ ಧ್ಯೇಯ. ನಂಬಿಕೆ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಪರಾಧಿಗಳಿಗೆ ಕಾನೂನು ಶಿಕ್ಷೆ ನೀಡುತ್ತದೆ ಎಂದು ಹೇಳಿದ್ದಾರೆ.
ಪರಿಸರವನ್ನು ಗಮನದಲ್ಲಿಟ್ಟುಕೊಂಡು ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಿದ್ದಕ್ಕೆ ಬಹಳ ಸಂತೋಷವಾಗುತ್ತಿದೆ. ಅಕ್ಟೋಬರ್ 2 ರಂದು ಸ್ವಚ್ಧ ಭಾರತ ಅಭಿಯಾನ 3 ವರ್ಷಗಳನ್ನು ಪೂರೈಸಲಿದೆ. 'ಸ್ವಚ್ಛತಾ ಹೇ ಸೇವಾ' ಗಾಂಧಿ ಜಯಂತಿ ದಿನ ಹತ್ತಿರ ಬರುತ್ತಿದ್ದು, ಶುಚಿತ್ವವನ್ನು ಗಮನದಲ್ಲಿಟ್ಟುಕೊಂಡು ಶುದ್ಧತೆಯನ್ನು ಕೇಂದ್ರೀಕರಿಸಲು ಗಾಂಧಿ ಜಯಂತಿಯಂದು ಚಳುವಳಿಯನ್ನು ಪ್ರಾರಂಭಿಸೋಣ. ಎಲ್ಲಾ ಹಬ್ಬಗಳಂದು ಸ್ವಚ್ಛತೆಯನ್ನು ಕಾಪಾಡೋಣ. ಭಾರತ ವೈವಿಧ್ಯತೆಯ ನಾಡಾಗಿದ್ದು, ನಮ್ಮ ಎಲ್ಲಾ ಹಬ್ಬಗಳು ಪ್ರಕೃತಿಗೆ ಹಾಗೂ ರೈತ ಕಲ್ಯಾಣಕ್ಕೆ ಸಂಬಂಧಪಟ್ಟಿವೆ.
ಪ್ರವಾಹದಿಂದ ಸಂಕಷ್ಟ ಎದುರಿಸುತ್ತಿದ್ದ ಗುಜರಾತ್ ಧನೆರಾದಲ್ಲಿದ್ದ 22 ದೇವಾಲಯಗಳು ಹಾಗೂ 3 ಮಸೀದಿಗಳನ್ನು ಜಮಾತ್ ಉಲೆಮಾ ಇ ಹಿಂದ್ ಸ್ವಯಂ ಸೇವಕರು ಸ್ವಚ್ಛಗೊಳಿಸಿದ್ದಾರೆ. ಇಂತಹ ಕಾರ್ಯಗಳನ್ನು ಮೆಚ್ಚಲೇಬೇಕು.
ಇಂದು 2,30,000 ಗ್ರಾಮಗಳನ್ನು ಮಲವಿಸರ್ಜನೆ ಮುಕ್ತ ಗ್ರಾಮಗಳೆಂದು ಘೋಷಣೆ ಮಾಡಲಾಗಿದೆ. ಶೇ.67 ರಷ್ಟು ಜನತೆ ಇಂದು ಶೌಚಾಲಯಗಳನ್ನು ಬಳಕೆ ಮಾಡುತ್ತಿದ್ದಾರೆ. ಈ ಹಿಂದೆ ಇದರ ಶೇಕಡಾವಾರು 39 ರಷ್ಟಿತ್ತು. ನಮ್ಮ ನಾಗರೀಕರ ಮೇಲೆ ನಂಬಿಕೆ ಇಡುವುದು ಅತ್ಯಂತ ಪ್ರಮುಖವಾದದ್ದು. ನಾವು ಭಾರತದ ಬಡವರನ್ನು ನಂಬಬೇಕು ಎಂದಿದ್ದಾರೆ.
ಇದೇ ವೇಳೆ ರಾಷ್ಟ್ರೀಯ ಕ್ರೀಡಾ ದಿನ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಮಾತನಾಡಿರುವ ಅವರು, ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಇಂದಿನ ಯುವಕರು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು. ಶೀಘ್ರದಲ್ಲಿಯೇ ಕ್ರೀಡಾ ಸಚಿವಾಲಯ 'ಸ್ಪೋರ್ಟ್ಸ್ ಟ್ಯಾಲೆಂಟ್ ಸರ್ಚ್ ಪೋರ್ಟಲ್' ಪ್ರಾರಂಭ ಮಾಡಲಿದೆ. ಫಿಫಾ ಅಂಡರ್-17 ವಿಶ್ವಕಪ್ ಆಡಲು ಭಾರತಕ್ಕೆ ಬರುತ್ತಿರುವ ಕ್ರೀಡಾಪಟುಗಳನ್ನು ನಾವು ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


