ಪಣಜಿ ಉಪ ಚುನಾವಣೆ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಗೆ ಜಯ
ತೀವ್ರ ಕುತೂಹಲ ಕೆರಳಿಸಿದ್ದ ಗೋವಾದ ಪಣಜಿ ವಿಧಾನಸಭಾ ಕ್ಷೇತ್ರದ ಉಪ ಚುನವಾವಣೆಯಲ್ಲಿ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಭರ್ಜರಿ ಜಯ ಸಾಧಿಸಿದ್ದಾರೆ.

ಪಣಜಿ: ತೀವ್ರ ಕುತೂಹಲ ಕೆರಳಿಸಿದ್ದ ಗೋವಾದ ಪಣಜಿ ವಿಧಾನಸಭಾ ಕ್ಷೇತ್ರದ ಉಪ ಚುನವಾವಣೆಯಲ್ಲಿ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಭರ್ಜರಿ ಜಯ ಸಾಧಿಸಿದ್ದಾರೆ.
ಪಣಜಿ, ಪಾಲ್ಪೋಯಿ, ಬಾವನಾ, ಅಂಧ್ರ ಪ್ರದೇಶದ ನಂದ್ಯಾಲ್ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಈ ಪೈಕಿ ಗೋವಾದ ಪಣಜಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಮನೋಹರ್ ಪರಿಕ್ಕರ್ ಅವರು ಭಾರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಪರಿಕ್ಕರ್ ಅವರು 4803 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಗಿರೀಶ್ ರಾಯ ಚೋಡ್ನಾಕರ್ ಅವರು 2252 ಮತಗಳನ್ನು ಮಾತ್ರ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ಕೇಂದ್ರ ಸಚಿವರಾಗಿದ್ದ ಪರಿಕ್ಕರ್ ಅವರು, ಗೋವಾ ಚುನಾವಣೆ ಬಳಿಕ ಬದಲಾದ ರಾಜಕೀಯ ಪರಿಸ್ಥಿತಿಗಳಿಂದಾಗಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ಗೋವಾ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಹಿನ್ನಲೆಯಲ್ಲಿ ಪಣಜಿ ಉಪ ಚುನಾವಣೆಯಲ್ಲಿ ಮನೋಹರ್ ಪರಿಕ್ಕರ್ ಅಅವರು ಸ್ಪರ್ಧಿಸಿದ್ದರು.
ಮುಂದಿನವಾರ ರಾಜ್ಯಸಭೆ ಸ್ಥಾನಕ್ಕೆ ರಾಜಿನಾಮೆ: ಪರಿಕ್ಕರ್
ಇದೇ ವೇಳೆ ಚುನಾವಣಾ ಗೆಲುವಿನ ಬಳಿಕ ಮಾತನಾಡಿದ ಸಿಎಂ ಮನೋಹರ್ ಪರಿಕ್ಕರ್ ಅವರು, ಮತದಾರರಿಗೆ ಧನ್ಯವಾದ ಹೇಳಿದರು. ಅಂತೆಯೇ ಮುಂದಿನವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಪರಿಕ್ಕರ್ ಘೋಷಣೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


