ರಾಮ್ ರಹೀಂ 'ಅತ್ಯಾಚಾರಿ' ತೀರ್ಪು: ಸುಬ್ರಮಣಿಯನ್ ಸ್ವಾಮಿ ಸಮರ್ಥನೆ
ಅತ್ಯಾಚಾರ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ದೋಷಿ ಎಂದು ನ್ಯಾಯಾಲಯ ನೀಡಿದ್ದ ತೀರ್ಪವನ್ನು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಸಮರ್ಥಿಸಿಕೊಂಡಿದ್ದಾರೆ...

Published On :
ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ದೋಷಿ ಎಂದು ನ್ಯಾಯಾಲಯ ನೀಡಿದ್ದ ತೀರ್ಪವನ್ನು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು. ರಾಮ್ ರಹೀಂ ವಿರುದ್ಧವಿದ್ದ ಸಾಕ್ಷ್ಯಾಧಾರಗಳು ಸ್ಪಷ್ಟವಾಗಿತ್ತು. ಇಂತಹ ಸಂದರ್ಭದಲ್ಲಿ ಖಂಡನೆಗಳು ವ್ಯಕ್ತವಾಗುವುದು ಸರಿಯಲ್ಲ. ರಾಮ್ ರಹೀಮ್ ಅವರಿಗೆ 7 ವರ್ಷಗಳ ಜೈಲು ಶಿಕ್ಷೆಯಂತೂ ಖಚಿತ. ಶಿಕ್ಷಯ ಪ್ರಮಾಣ ಗರಿಷ್ಠ ಜೀವಾವಧಿವರೆಗೂ ಆಗಬಹುದು. ಪರಿಸ್ಥಿತಿ ಹೀಗಿರುವಾಗ ಅವರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.
ಶಿಕ್ಷೆ ಪ್ರಮಾಣ ಪ್ರಕಟಗೊಳ್ಳುತ್ತಿರುವ ಹಿನ್ನಲೆಯಲ್ಲಿ ಹಲವೆಡೆ ಸಾಕಷ್ಟು ಭದ್ರತೆಗಳನ್ನು ನಿಯೋಜಿಸಲಾಗಿದೆ. ಪರಿಸ್ಥಿತಿ ನಿಭಾಯಿಸಲು ಸೇನಾ ಪಡೆಗಳು ಎಂತಹ ಮಟ್ಟಕ್ಕೆ ಬೇಕಾದರೂ ಇಳಿಯಬಹುದು ಎಂದು ತಿಳಿಸಿದ್ದಾರೆ.
2002ರಲ್ಲಿ ದಾಖಲಾಗದ ದೂರಿನಂತೆ, ಇಬ್ಬರು ಸಾಧ್ವಿಯರ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಶುಕ್ರವಾರವಷ್ಟೇ ನ್ಯಾಯಾಲಯವು ಬಾಬಾನ್ನು ದೋಷಿ ಎಂದು ತೀರ್ಪು ಪ್ರಕಟಿಸಿತ್ತು. ನ್ಯಾಯಾಲಯ ತೀರ್ಪು ಪ್ರಕಟಿಸುತ್ತಿದ್ದಂತೆ ಹರಿಯಾಣ ಹಾಗೂ ಪಂಜಾಬ್ ಹಿಂಸಾಚಾರದಿಂದ ಹೊತ್ತು ಉರಿಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅತ್ಯಾಚಾರbjpಬಿಜೆಪಿHaryanaಹರ್ಯಾಣSubramanian Swamyಸುಬ್ರಮಣಿಯನ್ ಸ್ವಾಮಿಸಿಬಿಐrape caseRamRahim Verdictಪಂಚಕುಲರಾಮ್ ರಹೀಮ್ ಸಿಂಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


