ದೇಶ

ಅಮೆರಿಕಾ: ಹೂಸ್ಟನ್ ಪ್ರವಾಹ; 200 ಭಾರತೀಯ ವಿದ್ಯಾರ್ಥಿಗಳು ಸಂಕಷ್ಟದಲ್ಲಿ- ಸುಷ್ಮಾ

ಅಮೆರಿಕದ ಟೆಕ್ಸಾಸ್ ರಾಜ್ಯಕ್ಕೆ 13 ವರ್ಷಗಳಲ್ಲೇ ಅತ್ಯಂತ ಭೀಕರ ಎನ್ನಲಾದ ಚಂಡಮಾರುತ ಅಪ್ಪಳಿಸಿದ್ದು, 1.3 ಕೋಟಿ ಜನ ಪ್ರವಾಹಕ್ಕೆ ಸಿಲುಕಿದ್ದಾರೆ. ಹೂಸ್ಟನ್ ವಿಶ್ವವಿದ್ಯಾಲಯದಲ್ಲಿ 200 ಭಾರತೀಯ ವಿದ್ಯಾರ್ಥಿಗಳು ನೆರೆ ಸಂತ್ರಸ್ತರಾಗಿದ್ದಾರೆಂದು ತಿಳಿದುಬಂದಿದೆ...

ಅಮೆರಿಕಾ: ಹೂಸ್ಟನ್ ಪ್ರವಾಹ; 200 ಭಾರತೀಯ ವಿದ್ಯಾರ್ಥಿಗಳು ಸಂಕಷ್ಟದಲ್ಲಿ- ಸುಷ್ಮಾ
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್
Published On :
ನವದೆಹಲಿ: ಅಮೆರಿಕದ ಟೆಕ್ಸಾಸ್ ರಾಜ್ಯಕ್ಕೆ 13 ವರ್ಷಗಳಲ್ಲೇ ಅತ್ಯಂತ ಭೀಕರ ಎನ್ನಲಾದ ಚಂಡಮಾರುತ ಅಪ್ಪಳಿಸಿದ್ದು, 1.3 ಕೋಟಿ ಜನ ಪ್ರವಾಹಕ್ಕೆ ಸಿಲುಕಿದ್ದಾರೆ. ಹೂಸ್ಟನ್ ವಿಶ್ವವಿದ್ಯಾಲಯದಲ್ಲಿ 200 ಭಾರತೀಯ ವಿದ್ಯಾರ್ಥಿಗಳು ನೆರೆ ಸಂತ್ರಸ್ತರಾಗಿದ್ದಾರೆಂದು ತಿಳಿದುಬಂದಿದೆ. 
ಅತ್ಯಂತ ಪ್ರಬಲ ಚಂಡ ಮಾರುತ 'ಹಾರ್ವೆ' ಅಮೆರಿಕಾದ ಟೆಕ್ಸಾಸ್ ರಾಜ್ಯಕ್ಕೆ ಅಳಿಸಿದ್ದು, 1.3 ಕೋಟಿ ಜನರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. 250 ತಂಡಗಳಿಂದ ರಕ್ಷಣಾ ಕಾರ್ಯ ನಡೆಸಲಾಗುತ್ತಿದ್ದು, ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 
ಪ್ರವಾಹ ಪೀಡಿತ ಘಟನೆಗಳಲ್ಲಿ ಈವರೆಗೂ ಐದು ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. 
ಹೂಸ್ಟನ್ ಸೇರಿ ಇತರ ಪ್ರದೇಶಗಳು ಜಲಾವೃತಗೊಂಡಿದೆ. ಹೀಗಾಗಿ ಹಡಗು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. 
ಇನ್ನು ಪ್ರವಾಹ ಪರಿಣಾಮ 200 ಭಾರತೀಯ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, 200 ಭಾರತೀಯ ವಿದ್ಯಾರ್ಥಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆಂದು ಹ್ಯೂಸ್ಟನ್ನ ಭಾರತೀಯ ಕಾನ್ಸುಲೇಟ್ ತಿಳಿಸಿದೆ. ವಿವಿ ಆವರಣದಲ್ಲಿರುವ ವಿದ್ಯಾರ್ಥಿಗಳ ಕುತ್ತಿಗೆ ಮಟ್ಟದವರೆಗೆ ನೀರು ತುಂಬಿಕೊಂಡಿದೆ. ಆಹಾರ ಒದಗಿಸಲು ಸಾಕಷ್ಟು ಯತ್ನಗಳನ್ನು ಮಾಡಲಾಗುತ್ತಿದೆ. ಆದರೆ, ದೋಣಿಗಳು ರಕ್ಷಣಾ ಕಾರ್ಯಾಚರಣೆಗಳಿಗೆ ಅಗತ್ಯವಿರುವುದರಿಂದಾಗಿ ಅಮೆರಿಕದ ಭದ್ರತಾ ಸಿಬ್ಬಂದಿಗಳು ಇದಕ್ಕೆ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಹೇಳಿದ್ದಾರೆ. 
ಶಾಲಿನಿ ಮತ್ತು ನಿಖಿತಾ ಭಾಟಿಯಾರನ್ನು ರಕ್ಷಿಸಿ ಐಸಿಯುಗೆ ದಾಖಲಿಸಲಾಗಿದೆ ಹ್ಸೂಸ್ಟನ್ ನಲ್ಲಿರುವ ಭಾರತೀಯ ಕಾನ್ಸುಲ್ ಜನರಲ್ ಡಾ. ಅನುಪಮ್ ರಾಯ್ ಅವರು ರಕ್ಷಣಾ ಕಾರ್ಯಾಚರಣೆಯನ್ನು ನಿಭಾಯಿಸುತ್ತಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.