ರೈತರ ಆತ್ಮಹತ್ಯೆ ತಡೆಯಲು 2022ರ ವೇಳೆಗೆ ಆದಾಯ ಹೆಚ್ಚಿಸಲು ಕ್ರಮ: 'ಸುಪ್ರೀಂ'ಗೆ ಕೇಂದ್ರ ಸರ್ಕಾರ
ರೈತರ ಆತ್ಮಹತ್ಯೆ ತಡೆಯಲು 2022ರ ವೇಳೆಗೆ ಅವರ ಆದಾಯ ಪ್ರಮಾಣವನ್ನು ದ್ವಿಗುಣಗೊಳಿಸುವ ಉದ್ದೇಶ....

Published On :
ನವದೆಹಲಿ: ರೈತರ ಆತ್ಮಹತ್ಯೆ ತಡೆಯಲು 2022ರ ವೇಳೆಗೆ ಅವರ ಆದಾಯ ಪ್ರಮಾಣವನ್ನು ದ್ವಿಗುಣಗೊಳಿಸುವ ಉದ್ದೇಶ ಸರ್ಕಾರಕ್ಕಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಕೇಂದ್ರ ಕೃಷಿ ಸಚಿವಾಲಯ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದು ಜಮ್ಮು-ಕಾಶ್ಮೀರ ಸೇರಿದಂತೆ ಸೇವಾ ಸೌಲಭ್ಯಗಳು ತಲುಪದ ಪ್ರದೇಶಗಳಿಗೆ ಉತ್ತಮ ರೀತಿಯಲ್ಲಿ ಹಣ ಹರಿದುಬರಲು ವಿಶೇಷ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕಡಿಮೆ ಆದಾಯ ಹೊಂದಿರುವ ರೈತರ ಸಮಸ್ಯೆಗಳನ್ನು ಸರ್ಕಾರ ಆಲಿಸಲಿದೆ. ಬಡತನ ರೇಖೆಗಿಂತ ಕೆಳಗಿರುವ ರೈತರ ಕೃಷಿ ಸಮಸ್ಯೆಗಳ ಬಗ್ಗೆ ಸರ್ಕಾರ ವಿಶೇಷ ಗಮನ ಹರಿಸಲಿದೆ. ರೈತರ ಆದಾಯ ಮಟ್ಟವನ್ನು ಹೆಚ್ಚಿಸುವ ಮೂಲಕ ಆತ್ಮಹತ್ಯೆಯಂತಹ ದುರದೃಷ್ಟಕರ ಘಟನೆಗಳನ್ನು ಬಗೆಹರಿಸಬಹುದು ಎಂದು ಹೇಳಿದೆ.
2022ರ ವೇಳೆಗೆ ರೈತರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಲು ಕೃಷಿ, ಸಹಕಾರ ಮತ್ತು ರೈತರ ಅಭಿವೃದ್ಧಿ ಇಲಾಖೆಗಳು ಆಂತರಿಕ ಸಚಿವ ಸಮಿತಿಯನ್ನು ರಚಿಸಿದ್ದು ಅವು ರೈತರ ಆದಾಯಗಳನ್ನು ಹೆಚ್ಚಿಸಲು ವಿವಿಧ ಆಯಾಮಗಳನ್ನು ಹುಡುಕುತಿದ್ದು, ಸೂಕ್ತ ಕಾರ್ಯತಂತ್ರಗಳನ್ನು ಶಿಫಾರಸು ಮಾಡಲಿದೆ ಎಂದು ವರದಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


