ತುರಂತೊ ಎಕ್ಸ್ ಪ್ರೆಸ್ ರೈಲು ಅಪಘಾತ: ಸಾವು, ನೋವು ಸಂಭವಿಸಿಲ್ಲ, ಕೇಂದ್ರ ರೈಲ್ವೆ ಮಾಹಿತಿ
ಇಂದು ಬೆಳಗಿನ ಜಾವ ಮಹಾರಾಷ್ಟ್ರದ ಕಲ್ಯಾಣ್ ನಗರ ಹತ್ತಿರ ಸಂಭವಿಸಿದ....

Published On :
ಮುಂಬೈ(ಮಹಾರಾಷ್ಟ್ರ): ಇಂದು ಬೆಳಗಿನ ಜಾವ ಮಹಾರಾಷ್ಟ್ರದ ಕಲ್ಯಾಣ್ ನಗರ ಹತ್ತಿರ ಸಂಭವಿಸಿದ ನಾಗ್ಪುರ-ಮುಂಬೈ ತುರಂತೊ ಎಕ್ಸ್ ಪ್ರೆಸ್ ರೈಲು ಬೋಗಿ ಹಳಿ ತಪ್ಪಿ ಉಂಟಾದ ದುರ್ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಕೇಂದ್ರ ರೈಲ್ವೆ ದೃಢಪಡಿಸಿದೆ.
ಇದುವರೆಗೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ನಾಗ್ಪುರ-ಮುಂಬೈ ಡುರೊಂಟೊ ಎಕ್ಸ್ ಪ್ರೆಸ್ ರೈಲು ಸಂಖ್ಯೆ 12290 ಅಸಂಗೌನ್ ಮತ್ತು ವಾಸಿಂದ್ ಮಧ್ಯೆ ಹಳಿ ತಪ್ಪಿತು. ಎಂಜಿನ್ ಮತ್ತು ಏಳು ಬೋಗಿಗಳು ಹಳಿ ತಪ್ಪಿವೆ ಎಂದು ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಸುನಿಲ್ ಉದಾಸಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಅಪಘಾತ ಸ್ಥಳದಿಂದ ಪ್ರಯಾಣಿಕರಿಗೆ ತಮ್ಮ ಸ್ಥಳಗಳಿಗೆ ತೆರಳಲು ಬಸ್ಸಿನ ವ್ಯವಸ್ಥೆ ಮಾಡಲು ರಾಜ್ಯ ಸರ್ಕಾರಕ್ಕೆ ನೆರವಾಗಲು ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಇಂದಿನ ಘಟನೆಯಿಂದಾಗಿ ಕಲ್ಯಾಣ್ ಮತ್ತು ಕಸಾರ ನಡುವೆ ಉಪ ನಗರ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


