ದೇಶ

ಮೃತ್ಯುಕೂಪವಾದ ಮಹಾರಾಷ್ಟ್ರ ಹೆದ್ದಾರಿ, 24 ಗಂಟೆಗಳಲ್ಲಿ 23 ಜನರ ಸಾವು

ಅಪೂರ್ಣ ಹೆದ್ದಾರಿ ಕಾಮಗಾರಿಗಳ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳಲ್ಲಿ ಮಹಾರಾಷ್ಟ್ರದ ಹೆದ್ದಾರಿಗಳು ಮೃತ್ಯುಕೂಪವಾಗಿ ಮಾರ್ಪಟ್ಟಿದ್ದು, 24 ಗಂಟೆಗಲಲ್ಲಿ ಸಂಭವಿಸಿದ ನಾಲ್ಕು...

ಮೃತ್ಯುಕೂಪವಾದ ಮಹಾರಾಷ್ಟ್ರ ಹೆದ್ದಾರಿ, 24 ಗಂಟೆಗಳಲ್ಲಿ 23 ಜನರ ಸಾವು
ಸಾಂದರ್ಭಿಕ ಚಿತ್ರ
Published On :
ಮುಂಬೈ: ಅಪೂರ್ಣ ಹೆದ್ದಾರಿ ಕಾಮಗಾರಿಗಳ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳಲ್ಲಿ ಮಹಾರಾಷ್ಟ್ರದ ಹೆದ್ದಾರಿಗಳು ಮೃತ್ಯುಕೂಪವಾಗಿ ಮಾರ್ಪಟ್ಟಿದ್ದು, 24 ಗಂಟೆಗಲಲ್ಲಿ ಸಂಭವಿಸಿದ ನಾಲ್ಕು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಟ್ಟು 23 ಮಂದಿ ಸಾವನ್ನಪ್ಪಿರುವುದಾಗಿ ವರದಿಗಳಾಗಿವೆ. 
ನಿನ್ನೆ ಮಧ್ಯಾಹ್ನ 1.30ರ ಸುಮಾರಿಗೆ ತ್ರಯಂಕೇಶ್ವರ-ಪುಣೆ ಹೆದ್ದಾರಿಯ ನಾರಾಯಣಗಾಂವ್ ಎಂಬಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಲಾರಿಗೆ ಡಿಕ್ಕೆ ಹೊಡೆದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಘಟನಾ ಸ್ಥಳದಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿ ಅಪೂರ್ಣವಾಗಿರುವುದು ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ. 
ನಾಸಿಕ್ ಜಿಲ್ಲೆಯ ಯೆಯೋಲಾ-ಮನ್ದ್ ಹೆದ್ದಾರಿಯಲ್ಲಿ ನಡೆದ ಮತ್ತೊಂದು ಅಪಘಾತದಲ್ಲಿ ಎಸ್'ಯುವಿ ವಾಹನವೊಂದು ಮಾರುತ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಎದುರಿನಿಂದ ಬಂದ ಬಸ್ ಗಾಯಾಳುಗಳಮೇಲೆ ಹರಿದು 10 ಮಂದಿ ಸಾವನ್ನಪ್ಪಿದ್ದಾರೆ. ಇದರಂತೆ ಮನ್ಮದ್-ಮಾಲೇಗಾಂವ್ ಹೆದ್ದಾರಿಯಲ್ಲಿ ಈರುಳ್ಳಿ ವರ್ತಕ ಇಂದ್ರ ಚೋಪ್ರಾ ಹಾಗೂ ಉದ್ಯಮಿ ಸಂಜಯ್ ತುಂಬೆ ಪ್ರಯಾಣಿಸುತ್ತಿದ್ದ ಕಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. 
ಕಳೆದ ಭಾನುವಾರವಷ್ಟೇ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸಚಿವ ನಿತಿನ್ ಗಡ್ಕರಿಯವರು ಹೆದ್ದಾರಿ ಕಾಮಗಾರಿ ತಡವಾಗುತ್ತಿದ್ದು, ಇದಕ್ಕೆ ಸಾರಿಗೆ ಇಲಾಖೆ ಅಧಿಕಾರಿಗಳೇ ಕಾರಣ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.