ದೇಶ

ಮಕ್ಕಳ ಪಾಲನೆ ಸರ್ಕಾರದ ಜವಾಬ್ದಾರಿನಾ?: ಯೋಗಿ ಆದಿತ್ಯನಾಥ್

ಗೋರಖ್ ಪುರದ ಬಿಆರ್ ಡಿ ಆಸ್ಪತ್ರೆಯಲ್ಲಿ 290 ಮಕ್ಕಳು ಸಾವನ್ನಪ್ಪಿರುವ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಯೋಗಿ ಆದಿತ್ಯನಾಥ್, ಮಕ್ಕಳಿಗೆ 2 ವರ್ಷವಾಗುತ್ತಿದ್ದಂತೆಯೇ ಪೋಷಕರು ಮಕ್ಕಳ ಮೇಲಿನ...

ಮಕ್ಕಳ ಪಾಲನೆ ಸರ್ಕಾರದ ಜವಾಬ್ದಾರಿನಾ?: ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Published On :
ಲಖನೌ: ಗೋರಖ್ ಪುರದ ಬಿಆರ್ ಡಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 290 ಮಕ್ಕಳು ಸಾವನ್ನಪ್ಪಿರುವ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಯೋಗಿ ಆದಿತ್ಯನಾಥ್, ಮಕ್ಕಳಿಗೆ 2 ವರ್ಷವಾಗುತ್ತಿದ್ದಂತೆಯೇ ಪೋಷಕರು ಮಕ್ಕಳ ಮೇಲಿನ ಜವಾಬ್ದಾರಿಯನ್ನು ಸರ್ಕಾರದ ಮೇಲೆ ಹೊರಿಸುತ್ತಾರೆ ಎಂದು ಅನಿಸುತ್ತದೆ ಎಂಬ ಹೇಳಿಕೆ ನೀಡಿದ್ದಾರೆ. 
ಕುಟುಕು ಕಾರ್ಯಾಚರಣೆ ಮೂಲಕ ಉತ್ತರ ಪ್ರದೇಶದಲ್ಲಿ ಸರ್ಕಾರಿ ವೈದ್ಯರು ಖಾಸಗಿ ಪ್ರಾಕ್ಟೀಸ್ ನಲ್ಲಿ ತೊಡಗಿರುವುದನ್ನು ಖಾಸಗಿ ಸುದ್ದಿ ವಾಹಿನಿಯೊಂದು ಪ್ರಸಾರ ಮಾಡಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಯೋಗಿ ಆದಿತ್ಯನಾಥ್, ಮಾಧ್ಯಮಗಳು ಎಂದಿಗೂ ನಕಾರಾತ್ಮಕ ಅಂಶಗಳನ್ನೇ ಬಿತ್ತರಿಸುತ್ತದೆ. ಸರ್ಕಾರದ ಹೊಣೆಗಾರಿಕೆ ಇದೆ ಎಂದು ಒಪ್ಪಿಕೊಳ್ಳುತ್ತೇವೆ, ಆದರೆ ಉಳಿದವರೆಲ್ಲರೂ ಜವಾಬ್ದಾರಿಯಿಂದ ವಿಮುಖರಾದಂತೆ ತೋರುತ್ತಿದೆ ಎಂದಿದ್ದು ಮಕ್ಕಳು ಸಂಪೂರ್ಣವಾಗಿ ಸರ್ಕಾರದ ಜವಾಬ್ದಾರಿಯಲ್ಲ ಎಂಬ ಅರ್ಥ ಬರುವ ರೀತಿಯ ಹೇಳಿಕೆ ನೀಡಿದ್ದಾರೆ. 
ಸರ್ಕಾರಿ ವೈದ್ಯರು ಖಾಸಗಿ ಕ್ಲಿನಿಕ್ ಗಳನ್ನು ನಡೆಸುತ್ತಿದ್ದು, ಅನಗತ್ಯವಾಗಿ ರೋಗಿಗಳಿಗೆ ಹೆಚ್ಚಿನ ತಪಾಸಣೆ, ಪರೀಕ್ಷೆಗಳನ್ನು ನಡೆಸುತ್ತಿರುವುದರ ಬಗ್ಗೆ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರ ಆದೇಶಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.