ದೇಶ

ಫೇಸ್​ಬುಕ್​ ಲೈವ್ ಅಪಘಾತ: ಕಾರು ಪಲ್ಟಿಯಾಗಿ 3 ಸಾವು

ಫೇಸ್ ಬುಕ್ ನಲ್ಲಿ ಲೈವ್ ವಿಡಿಯೋ ಮಾಡಿಕೊಂಡು ಚಾಲನೆ ಮಾಡುವಾಗ ಕಾರು ಪಲ್ಟಿ ಹೊಡೆದು ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಶ್ರೀನಗರದಲ್ಲಿ ನಡೆದಿದೆ...

ಫೇಸ್​ಬುಕ್​ ಲೈವ್ ಅಪಘಾತ: ಕಾರು ಪಲ್ಟಿಯಾಗಿ 3 ಸಾವು
ಅಪಘಾತದ ದೃಶ್ಯ
Published On :
ಶ್ರೀನಗರ: ಫೇಸ್ ಬುಕ್ ನಲ್ಲಿ ಲೈವ್ ವಿಡಿಯೋ ಮಾಡಿಕೊಂಡು ಚಾಲನೆ ಮಾಡುವಾಗ ಕಾರು ಪಲ್ಟಿ ಹೊಡೆದು ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಶ್ರೀನಗರದಲ್ಲಿ ನಡೆದಿದೆ. 
ಭಾರತದಲ್ಲಿ ಫೇಸ್ ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವಾಗ ಸಂಭವಿಸಿದ ಮೊದಲ ಅಪಘಾತ ಇದಾಗಿದ್ದು ಅಪಘಾತದಲ್ಲಿ ಜಮ್ಮು ಮತ್ತು ಕಾಶ್ಮೀರದ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಲೈವ್ ವಿಡಿಯೋ ಸ್ಟ್ರೀಮ್ ಮಾಡುತ್ತಾ ವೇಗವಾಗಿ ಕಾರು ಚಲಾಯಿಸಿದ್ದರಿಂದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. 
ಈ ಅಪಘಾತ ಕಳೆದ ತಿಂಗಳ ಆಗಸ್ಟ್ 14ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಾರುತಿ 800 ಕಾರಿನಲ್ಲಿ ನಾಲ್ವರು ಯುವಕರಿದ್ದು ಇದರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.