ದೇಶ

ಉತ್ತರಾಖಂಡ್: ಸರ್ಕಾರಿ ಬಸ್ ಮೇಲೆ ಹೈ ಟೆನ್ಷನ್ ವಿದ್ಯುತ್ ತಂತಿ ಹರಿದು ಬಿದ್ದು ಇಬ್ಬರು ಸಾವು

ಉತ್ತರಾಖಂಡ್ ಸರ್ಕಾರಿ ಬಸ್ ಮೇಲೆ ಹೈ ಟೆನ್ಷನ್ ವಿದ್ಯುತ್ ತಂತಿ ಹರಿದು ಬಿದ್ದು ಓರ್ವ ಹಿರಿಯ ನಾಯಕ ಸೇರಿದಂತೆ ಇಬ್ಬರು ಮೃತಪಟ್ಟಿರುವ....

ಉತ್ತರಾಖಂಡ್: ಸರ್ಕಾರಿ ಬಸ್ ಮೇಲೆ ಹೈ ಟೆನ್ಷನ್ ವಿದ್ಯುತ್ ತಂತಿ ಹರಿದು ಬಿದ್ದು ಇಬ್ಬರು ಸಾವು
ಸಾಂದರ್ಭಿಕ ಚಿತ್ರ
Published On :
ಡೆಹ್ರಾಡೂನ್: ಉತ್ತರಾಖಂಡ್ ಸರ್ಕಾರಿ ಬಸ್ ಮೇಲೆ ಹೈ ಟೆನ್ಷನ್ ವಿದ್ಯುತ್ ತಂತಿ ಹರಿದು ಬಿದ್ದು ಓರ್ವ ಹಿರಿಯ ನಾಯಕ ಸೇರಿದಂತೆ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಮರ್ಚುಲಾ ಪ್ರವಾಸ ತಾಣದಲ್ಲಿ ನಡೆದಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.
ಗರ್ವಾಲ್-ಕುಮೋನ್ ಗಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹೈ ಟೆನ್ಷನ್ ವಿದ್ಯುತ್ ತಂತಿ ಹರಿದು ಬಿದ್ದು ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ. ಬಸ್ ನಲ್ಲಿ ಒಟ್ಟು 19 ಪ್ರಯಾಣಿಕರಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದವರು ತಕ್ಷಣವೇ ಬಸ್ ನಿಂದ ಇಳಿದು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಗಾಯಾಳು ಮಹಿಳೆಯನ್ನು ರಾಮನಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಸಾಲ್ಟ್ ಬ್ಲಾಕ್ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಗೋಪಾಲ್ ರಾಮ್ ಬಿನ್ವಾಲ್ ಅವರು ತಿಳಿಸಿದ್ದಾರೆ.
ಮೃತಪಟ್ಟವರು ಜಮ್ಲಿ ದೇವಿ(75) ಮತ್ತು ಸೋಹನ್ ಚಂದ್ರ(45) ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.