ದೇಶ

ಮುಂಬೈನಲ್ಲಿ ಬಹು ಅಂತಸ್ತಿನ ಕಟ್ಟಡ ಕುಸಿತ: 10 ಸಾವು, 20ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ಸತತ ಭಾರಿ ಮಳೆಯಿಂದಾಗಿ ಕಂಗಾಲಾಗಿರುವ ಮುಂಬೈನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಗುರುವಾರ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ.

ಮುಂಬೈನಲ್ಲಿ ಬಹು ಅಂತಸ್ತಿನ ಕಟ್ಟಡ ಕುಸಿತ: 10 ಸಾವು, 20ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ
ಕುಸಿದ ಕಟ್ಟಡ
Published On :

ಮುಂಬೈ: ಸತತ ಭಾರಿ ಮಳೆಯಿಂದಾಗಿ ಕಂಗಾಲಾಗಿರುವ ಮುಂಬೈನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಗುರುವಾರ ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 20ಕ್ಕೂ ಅಧಿಕ ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ.

ಮುಂಬೈನ ಡೋಂಗ್ರಿ ಪ್ರದೇಶದ ಭೇಂಡಿ ಬಜಾರ್ ನಲ್ಲಿರುವ ಜನವಸತಿ ಪ್ರದೇಶದ ಮೂರು ಅಂತಸ್ತಿನ ಕಟ್ಟಡ ಇಂದು ಬೆಳಗ್ಗೆ ಕುಸಿದಿದ್ದು, ಕಟ್ಟಡದಲ್ಲಿ ಸುಮಾರು 20ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ಇದೆ. ಈ ಪೈಕಿ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಘಟನಾ ಸ್ಥಳಕ್ಕೆ  ದೌಡಾಯಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಅವಶೇಷ ತೆರವುಗೊಳಿಸುತ್ತಿದ್ದು, ಅಂತೆಯೇ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಈ ವರೆಗೂ ರಕ್ಷಣಾ ಸಿಬ್ಬಂದಿ 11 ಮಂದಿಯನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಪ್ರಸ್ತುತ ಕುಸಿದಿರುವ ಕಟ್ಟಡ ಹಳೆಯ ಜನವಸತಿ ಕಟ್ಟಡವಾಗಿದ್ದು, 25ಕ್ಕೂ ಅಧಿಕ ಮಂದಿ ಕಟ್ಟಡದಲ್ಲಿ ನೆಲೆಸಿದ್ದರು ಎಂದು ಹೇಳಲಾಗಿದೆ.

ಹೆಚ್ಚಿನ ವರದಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.