ದೇಶ

ಅತ್ಯಾಚಾರಿ ರಾಮ್ ರಹೀಮ್ ಸಿಂಗ್ ಗೆ ಪದ್ಮ ಪ್ರಶಸ್ತಿ ನೀಡುವಂತೆ 4,208 ಜನರಿಂದ ಶಿಫಾರಸು!

ಅತ್ಯಾಚಾರಿ ಬಾಬಾ, ಡೇರಾ ಸಚ್ಚಾ ಸೌದ ಮುಖ್ಯಸ್ಥ, ಸ್ವಯಂ ಘೋಷಿತ ದೇವಮಾನವ ಗುರ್ಮೀತ್‌ ರಾಮ್ ರಹೀಮ್ ಸಿಂಗ್‌ಗೆ ಪ್ರತಿಷ್ಠಿತ...

ಅತ್ಯಾಚಾರಿ ರಾಮ್ ರಹೀಮ್ ಸಿಂಗ್ ಗೆ ಪದ್ಮ ಪ್ರಶಸ್ತಿ ನೀಡುವಂತೆ 4,208 ಜನರಿಂದ ಶಿಫಾರಸು!
ಗುರ್ಮೀತ್‌ ರಾಮ್ ರಹೀಮ್ ಸಿಂಗ್‌
Published On :
ನವದೆಹಲಿ: ಅತ್ಯಾಚಾರಿ ಬಾಬಾ, ಡೇರಾ ಸಚ್ಚಾ ಸೌದ ಮುಖ್ಯಸ್ಥ, ಸ್ವಯಂ ಘೋಷಿತ ದೇವಮಾನವ ಗುರ್ಮೀತ್‌ ರಾಮ್ ರಹೀಮ್ ಸಿಂಗ್‌ಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ ನೀಡುವಂತೆ 4,208ಕ್ಕೂ ಹೆಚ್ಚು ಜನ ಶಿಫಾರಸು ಮಾಡಿದ್ದಲ್ಲದೆ ಸ್ವತಃ ರಾಮ್ ರಹೀಂ ಸಿಂಗ್ ತನಗೆ ಪದ್ಮ ಪ್ರಶಸ್ತಿ ನೀಡುವಂತೆ ಐದು ಬಾರಿ ಶಿಫಾರಸು ಮಾಡಿಕೊಂಡಿದ್ದ ವಿಷಯ ಈಗ ಬಹಿರಂಗವಾಗಿದೆ.
2017ರ ಪದ್ಮ ಪ್ರಶಸ್ತಿಯ ಶಿಫಾರಸು ಅಥವಾ ನಾಮ ನಿರ್ದೇಶನದ ಪಟ್ಟಿಯ ಪ್ರಕಾರ, ಪ್ರತಿಷ್ಠಿತ ಪ್ರಶಸ್ತಿಗಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ಒಟ್ಟು 18,768 ಅರ್ಜಿಗಳು ಬಂದಿವೆ. ಈ ವೈಕಿ ವಿವಾದಾತ್ಮಕ ಬಾಬಾ ರಾಮ್ ರಹೀಮ್ ಸಿಂಗ್ ಗೆ ಅತಿ ಹೆಚ್ಚು 4,208 ಶಿಫಾರಸುಗಳು ಬಂದಿದ್ದು, ಈ ಎಲ್ಲಾ ಶಿಫಾರಸುಗಳು ಹರಿಯಾಣದ ಸಿರ್ಸಾದ ಡೇರಾ ಸಚ್ಚಾ ಸೌದದಿಂದ ಬಂದಿವೆ ಎಂದು ಪಿಟಿಐ ವರದಿ ಮಾಡಿದೆ.
ಸಂತ ಡಾ  ಗುರ್ಮೀತ್‌ ರಾಮ್ ರಹೀಮ್ ಸಿಂಗ್‌ ಅವರಿಗೆ ಪದ್ಮ ಪ್ರಶಸ್ತಿ ನೀಡುವಂತೆ ಅವರ 4,208 ಬೆಂಬಲಿಗರು ಶಿಫಾರಸು ಮಾಡಿದ್ದಾರೆ.
ಕಳೆದ ಸೋಮವಾರ ಅತ್ಯಾಚಾರ ಪ್ರಕರಣದಲ್ಲಿ ಡೇರಾ ಮುಖ್ಯಸ್ಥ ಗುರ್ಮೀತ್‌ ರಾಮ್ ರಹೀಮ್ ಸಿಂಗ್‌ ಗೆ ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಹಾಗೂ 30 ಲಕ್ಷ ರುಪಾಯಿ ದಂಡ ವಿಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.