ನೂತನ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ರಾಜೀವ್ ಗೌಬ ನೇಮಕ
ಕೇಂದ್ರ ನಗರ ಅಭಿವೃದ್ಧಿ ಕಾರ್ಯದರ್ಶಿ ರಾಜೀವ್ ಗೌಬ ಅವರು ಕೇಂದ್ರದ ನೂತನ ಗೃಹ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.

Published On :
ಹೊಸದಿಲ್ಲಿ: ಕೇಂದ್ರ ನಗರ ಅಭಿವೃದ್ಧಿ ಕಾರ್ಯದರ್ಶಿ ರಾಜೀವ್ ಗೌಬ ಅವರು ಕೇಂದ್ರದ ನೂತನ ಗೃಹ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.
2017 ರ ಜೂನ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಅಧಿಕಾರಿಗಳ ಅಧಿಕಾರ ಪುನರ್ರಚನೆಯಲ್ಲಿ ತೊಡಗಿದ್ದು, ಗೃಹ ಕಾರ್ಯದರ್ಶಿಯಾಗಿ ರಾಜೀವ್ ಮೆಹರಿಶಿ ಅವರ ಎರಡು ವರ್ಷಗಳ ಅವಧಿ ಮುಗಿದ ನಂತರ ಗೌಬ ಅವರನ್ನು ಹೊಸ ಗೃಹ ಕಾರ್ಯದರ್ಶಿಯಾಗಿ ನೇಮಕ ಮಾಡಲು ನಿರ್ಧರಿಸಿದೆ.
ರಾಜೀವ್ ಗೌಬ 1982 ರ ಬ್ಯಾಚ್ ಕೇಡರ್ ಐಎಎಸ್ ಅಧಿಕಾರಿ ಆಗಿದ್ದು ಗೃಹ ಸಚಿವಾಲಯದಲ್ಲಿ ಇದು ಅವರ ಎರಡನೆ ಅವಧಿಯಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


