ಬಂಧಿತ 3 ಕಾಶ್ಮೀರಿ ಪ್ರತ್ಯೇಕತಾವಾದಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ
ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಉತ್ತೇಜನ ನೀಡುವುದಕ್ಕಾಗಿ ಪಾಕಿಸ್ತಾನದಿಂದ ಆರ್ಥಿಕ ನೆರವು ಪಡೆಯುತ್ತಿದ್ದ ಆರೋಪದಡಿ ಬಂಧನಕ್ಕೊಳಗಾಗಿರುವ 3 ಕಾಶ್ಮೀರಿ ಪ್ರತ್ಯೇಕತಾವಾದಿಗಳ ನ್ಯಾಯಾಂಗ...

Published On :
ನವದೆಹಲಿ: ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಉತ್ತೇಜನ ನೀಡುವುದಕ್ಕಾಗಿ ಪಾಕಿಸ್ತಾನದಿಂದ ಆರ್ಥಿಕ ನೆರವು ಪಡೆಯುತ್ತಿದ್ದ ಆರೋಪದಡಿ ಬಂಧನಕ್ಕೊಳಗಾಗಿರುವ 3 ಕಾಶ್ಮೀರಿ ಪ್ರತ್ಯೇಕತಾವಾದಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸ್ಥಳೀಯ ವಿಸ್ತರಿಸಿದೆ.
ಅಫ್ತಾಬ್ ಹಿಲಾಲಿ ಷಾ, ಅಯಾಜ್ ಅಕ್ಬರ್, ಫಾರೂಕ್ ಅಹ್ಮದ್ ದರ್ ನ್ಯಾಯಾಂಗ ಬಂಧನವನ್ನು ಸೆ.27 ರ ವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. 28 ದಿನಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿದ್ದರ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಆ.28 ರಂದು ನ್ಯಾಯಾಲಯ ಇನ್ನೂ ನಾಲ್ವರು ಕಾಶ್ಮೀರಿ ಪ್ರತ್ಯೇಕತಾವಾದಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆ.27 ವರೆಗೆ ವಿಸ್ತರಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


