ದೇಶ

ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸಲು ಮದುವೆ ವಿನಾಯಿತಿ ಇಲ್ಲ: ಸುಪ್ರೀಂ ಕೋರ್ಟ್

ಅಪ್ರಾಪ್ತ ಪತ್ನಿ ಜೊತೆಗೆ ಒತ್ತಾಯದ ಲೈಂಗಿಕ ಕ್ರಿಯೆ ನಡೆಸುವುದು ಕ್ರಿಮಿನಲ್ ಅಪರಾಧವಾಗಿದೆ ಎಂದು...

ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸಲು ಮದುವೆ ವಿನಾಯಿತಿ ಇಲ್ಲ: ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್(ಸಂಗ್ರಹ ಚಿತ್ರ)
Published On :
ನವದೆಹಲಿ: ಅಪ್ರಾಪ್ತ ಪತ್ನಿ ಜೊತೆಗೆ ಒತ್ತಾಯದ ಲೈಂಗಿಕ ಕ್ರಿಯೆ ನಡೆಸುವುದು ಕ್ರಿಮಿನಲ್ ಅಪರಾಧವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಉಚ್ಚ ನ್ಯಾಯಾಲಯ ಈ ಹಿಂದೆ, ಭಾರತೀಯ ದಂಡ ಸಂಹಿತೆ 375 ರ ಪ್ರಕಾರ 15 ವರ್ಷಕ್ಕಿಂತ ಕೆಳ ಹರೆಯದ ಪತ್ನಿ ಜೊತೆಗೆ ಪತಿ ಸಂಭೋಗ ಅಥವಾ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರವಲ್ಲ ಎಂದು ತೀರ್ಪು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. 
ನಿನ್ನೆ ವಿಚಾರಣೆ ನಡೆಸಿದ ನ್ಯಾಯಾಲಯ, ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸಲು ಕಾನೂನಿನಡಿಯಲ್ಲಿ ಮದುವೆ ಒಂದು ವಿನಾಯ್ತಿಯಲ್ಲ ಎಂದು ಹೇಳಿದೆ.
15ರಿಂದ 18 ವರ್ಷದೊಳಗಿನ ಪತ್ನಿ ಜೊತೆಗೆ ಶಾರೀರಿಕ ಸಂಬಂಧ ಹೊಂದಲು ಅವಕಾಶ ನೀಡುವ ಸಾಧ್ಯತೆಯ ಮೌಲ್ಯವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಹೀಗೆ ಹೇಳಿದೆ.
ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕೂಡ ದೇಶದ ಕೆಲ ಭಾಗಗಳಲ್ಲಿ ಬಾಲ್ಯ ವಿವಾಹ ಪದ್ಧತಿ ಇನ್ನೂ ಉಳಿದಿರುವುದಕ್ಕೆ ನ್ಯಾಯಾಲಯ ಬೇಸರ ವ್ಯಕ್ತಪಡಿಸಿದೆ. ಈ ಸಂಗತಿ ನಮ್ಮ ಸಮಾಜದಲ್ಲಿ ಅನಿಷ್ಟವಾಗಿದ್ದು ಹೆಣ್ಣು ಮಕ್ಕಳ  ಪೋಷಕರೇ ಇದಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಖೇದಕರ ಎಂದು ಕೋರ್ಟ್ ವಿಷಾದ ವ್ಯಕ್ತಪಡಿಸಿದೆ.
ದೇಶದ ಅಲ್ಲಲ್ಲಿ ನಡೆಯುತ್ತಿರುವ ಹೆಣ್ಣು  ಮಕ್ಕಳ ಬಾಲ್ಯ ವಿವಾಹವನ್ನು ಅವರ ಪೋಷಕರೇ ಮಾಡುತ್ತಿರುವುದು ದುರದೃಷ್ಟಕರ ವಾಸ್ತವ ಸಂಗತಿ. ಇವುಗಳ ಮಧ್ಯೆ ಕೆಲವು ಕಡೆ ಅಪ್ರಾಪ್ತ ಬಾಲಕ, ಬಾಲಕಿಯರು ಪ್ರೀತಿಸಿ ಮದುವೆಯಾಗುತ್ತಿದ್ದಾರೆ ಎಂದು ನ್ಯಾಯಮೂರ್ತಿ ಎಂ.ಬಿ.ಲೊಕುರ್ ಮತ್ತು ದೀಪಕ್ ಗುಪ್ತ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.