ದೇಶ

ಬಾಲಕಿಯರ ಪೋಷಕರೇ ಬಾಲ್ಯವಿವಾಹ ಬೆಂಬಲಿಸುತ್ತಿರುವುದು ದುರದೃಷ್ಟಕರ: ಸುಪ್ರೀಂ

ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಅಸ್ತಿತ್ವದ ಹೊರತಾಗಿಯೂ ದೇಶದಲ್ಲಿ ಬಾಲ್ಯ ವಿವಾಹ ನಡೆಯುತ್ತಿದೆ.ಎಂದು ಸುಪ್ರೀಂ ಕೋರ್ಟ್ ವಿಷಾದ ವ್ಯಕ್ತಪಡಿಸಿದೆ

ಬಾಲಕಿಯರ ಪೋಷಕರೇ ಬಾಲ್ಯವಿವಾಹ ಬೆಂಬಲಿಸುತ್ತಿರುವುದು ದುರದೃಷ್ಟಕರ: ಸುಪ್ರೀಂ
ಬಾಲ್ಯವಿವಾಹ ನಿಷೇಧ ಕಾಯ್ದೆ
Published On :
ಹೊಸದಿಲ್ಲಿ: ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಅಸ್ತಿತ್ವದ ಹೊರತಾಗಿಯೂ ದೇಶದಲ್ಲಿ ಬಾಲ್ಯ ವಿವಾಹ ನಡೆಯುತ್ತಿದೆ. ಇದನ್ನು ಹೆಚ್ಚಾಗಿ ಮಗುವಿನ ಹೆತ್ತವರ ಪ್ರೋತ್ಸಾಹದಿಂದಲೇ ನಡೆಸಲಾಗುತ್ತಿದೆ, ಇದು ದುರದೃಷ್ಟಕರ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಂ.ಬಿ.ಲೊಕುರ್ ಮತ್ತು ದೀಪಕ್ ಗುಪ್ತ ಅವರನ್ನೊಳಗೊಂಡ ನ್ಯಾಯಪೀಠ ಇಂದು ವಿಷಾದ ವ್ಯಕ್ತಪಡಿಸಿದೆ 
15-18 ವರ್ಷ ವಯಸ್ಸಿನ ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವುದರಿಂದ ವಿನಾಯತಿ ನೀಡಬೇಕೆಂದು ಎನ್‌ಜಿಒವೊಂದು ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ವಿಚಾರಣೆಯ ಸಂದರ್ಭದಲ್ಲಿ, ಇಂಡಿಯನ್ ಫೀನಲ್ ಕೋಡ್ (ಐಪಿಸಿ) ವಿಭಾಗ 375 ರಲ್ಲಿ ಅಂತಹ ನಿಬಂಧನೆಗಳನ್ನು ತೆಗೆದುಹಾಕುವುದರಿಂದ ಅಪರಾಧಗಳಾ ಸಂಖ್ಯೆ ಹೆಚ್ಚುತ್ತದೆ ಎಂದು ಸುಪ್ರೀಂ ಅಭಿಪ್ರಾಯಿಸಿದೆ.
ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತೆಯೊಂದಿಗೆ ಮದುವೆಯಾಗುವುದಾಗಿ ಹೇಳಲಾಗುವುದಿಲ್ಲ, ಇದರಿಂದಾಗಿ  ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಅಪ್ರಾಪ್ತೆ ಪತ್ನಿಯೊಂದಿಗೂ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧ ಎಂದು ಇದೇವೇಳೆ ಕೋರ್ಟ್ ಅಭಿಪ್ರಾಯ ಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.