ವಿವಿಐಪಿ ಕಾಪ್ಟರ್ ಹಗರಣ: ವಾಯುಪಡೆ ಮಾಜಿ ಮುಖ್ಯಸ್ಥ ತ್ಯಾಗಿ ವಿರುದ್ಧ ಚಾರ್ಜ್ ಶೀಟ್
ಸುಮಾರು 3600 ಕೋಟಿ ರುಪಾಯಿಗಳ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆ(ಐಎಎಫ್) ಮಾಜಿ...

Published On :
ನವದೆಹಲಿ: ಸುಮಾರು 3600 ಕೋಟಿ ರುಪಾಯಿಗಳ ವಿವಿಐಪಿ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆ(ಐಎಎಫ್) ಮಾಜಿ ಮುಖ್ಯಸ್ಥ ಎಸ್ಪಿ ತ್ಯಾಗಿ ಹಾಗೂ ಇತರೆ ಒಂಬತ್ತು ಆರೋಪಿಗಳ ವಿರುದ್ಧ ಸಿಬಿಐ ಶುಕ್ರವಾರ ದೆಹಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.
ಬಹುಕೋಟಿ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್ ಪಿ ತ್ಯಾಗಿ, ಅವರ ಸಹೋದರ ಸಂಜೀವ್ ಅಲಿಯಾಸ್ ಜ್ಯೂಲಿ ಮತ್ತು ವಕೀಲ ಗೌತಮ್ ಖೇತನ್ ಸೇರಿದಂತೆ 10 ಆರೋಪಿಗಳ ವಿರುದ್ಧ ಸಿಬಿಐ ಇಂದು ಸಿಬಿಐ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಅವರಿಗೆ ಚಾರ್ಜ್ ಶೀಟ್ ಸಲ್ಲಿಸಿದೆ.
ಲಂಚದ ಹಣವನ್ನು ಭಾರತ ಮತ್ತು ಇತರೆ ಸಂಸ್ಥೆಗಳಿಗೆ ತಲುಪಿಸಿದ್ದು ಖೇತನ್ ಎಂದು ಸಿಬಿಐ ಚಾರ್ಜ್ ಶೀಟ್ ಆರೋಪಿಸಿದೆ. ಇನ್ನು ಸಂಜೀವ್ ಅವರಿಗೆ ಯುರೋಪಿಯನ್ ಮಧ್ಯವರ್ತಿ ಕಾರ್ಲೋ ಗೆರೋಸಾ ಗೊತ್ತಿದ್ದರು ಎಂದು ಸಿಬಿಐ ದೂರಿದೆ.
2007ರಲ್ಲಿ ಸೇವೆಯಿಂದ ನಿವೃತ್ತಿಯಾಗಿದ್ದ ಎಸ್ ಪಿ ತ್ಯಾಗಿ ಹಾಗೂ ಅವರ ಸಹೋದರ ಸಂಜೀವ್ ಮತ್ತು ಖೇತನ್ ಅವರನ್ನು ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಕಳೆದ ಡಿಸೆಂಬರ್ 9ರಂದು ಬಂಧಿಸಿತ್ತು. ಸದ್ಯ ಈ ಮೂವರು ಆರೋಪಿಗಳು ಜಾಮೀನಿನ ಮೇಲೆ ಹೊರಗಡೆ ಬಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


