ದೇಶ

ಗುಜರಾತ್ ನಲ್ಲಿ ದುಬಾರಿ ಶಿಕ್ಷಣ ಶುಲ್ಕವೇ ಹೊರೆ; ನವಭಾರತದ ಕನಸು ಹೇಗೆ ಸಾಧ್ಯ: ಮೋದಿಗೆ ರಾಹುಲ್ ಪ್ರಶ್ನೆ

ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ನಿರತರಾಗಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ರಾಜ್ಯದಲ್ಲಿರುವ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿರುವ ದುಬಾರಿ ಶಿಕ್ಷಣ ಶುಲ್ಕದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ

ಗುಜರಾತ್ ನಲ್ಲಿ ದುಬಾರಿ ಶಿಕ್ಷಣ ಶುಲ್ಕವೇ ಹೊರೆ; ನವಭಾರತದ ಕನಸು ಹೇಗೆ ಸಾಧ್ಯ: ಮೋದಿಗೆ ರಾಹುಲ್ ಪ್ರಶ್ನೆ
ರಾಹುಲ್ ಗಾಂಧಿ
Published On :
ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ನಿರತರಾಗಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ರಾಜ್ಯದಲ್ಲಿರುವ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿರುವ ದುಬಾರಿ ಶಿಕ್ಷಣ ಶುಲ್ಕದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ. 
22 ವರ್ಷಗಳ ಲೆಕ್ಕವನ್ನು ಗುಜರಾತ್ ಕೇಳುತ್ತಿದೆ, ಗುಜರಾತ್ ನಲ್ಲಿರುವ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ, ದುಬಾರಿ ಶಿಕ್ಷಣ ಶುಲ್ಕ ನಿಗದಿಪಡಿಸಲಾಗಿದ್ದು ವಿದ್ಯಾರ್ಥಿಗಳಿಗೆ ಹೊರೆಯಾಗುತ್ತಿದೆ ಹೀಗಿರುವಾಗ ನವಭಾರತದ ಕನಸು ಹೇಗೆ ಸಾಧ್ಯ ಎಂದು ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.
ಶಿಕ್ಷಣ ಕ್ಷೇತ್ರದ ಹೂಡಿಕೆ ವಿಚಾರದಲ್ಲಿ ಗುಜರಾತ್ ಏಕೆ 26 ನೇ ಸ್ಥಾನದಲ್ಲಿದೆ? ಯುವಕರೇನು ತಪ್ಪು ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಕೇಳಿದ್ದಾರೆ. ಗುಜರಾತ್ ನಲ್ಲಿ ಚುನಾವಣೆ ಪ್ರಾರಂಭವಾಗುವವರೆಗೂ ಮೋದಿಗೆ ಒಂದೊಂದು ಪ್ರಶ್ನೆ ಕೇಳುವ ಪಕ್ಷದ ಕಾರ್ಯತಂತ್ರದ ಭಾಗವಾಗಿ ರಾಹುಲ್ ಗಾಂಧಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.