ದೇಶ

ಆರ್ ಕೆ ನಗರ ಉಪ ಚುನಾವಣೆ: ದಶಕದ ನಂತರ ಡಿಎಂಕೆಗೆ ಎಂಡಿಎಂಕೆ ಬೆಂಬಲ

ಡಿಸೆಂಬರ್ 21ರಂದು ನಡೆಯಲಿರುವ ಆರ್ ಕೆ ನಗರ ಉಪ ಚುನಾವಣೆಯಲ್ಲಿ ದಶಕದ ನಂತರ ತಮಿಳುನಾಡು ಪ್ರಮುಖ ಪ್ರತಿಪಕ್ಷ ಡಿಎಂಕೆಗೆ....

ಆರ್ ಕೆ ನಗರ ಉಪ ಚುನಾವಣೆ: ದಶಕದ ನಂತರ ಡಿಎಂಕೆಗೆ ಎಂಡಿಎಂಕೆ ಬೆಂಬಲ
ವೈಕೊ
Published On :
ಚೆನ್ನೈ: ಡಿಸೆಂಬರ್ 21ರಂದು ನಡೆಯಲಿರುವ ಆರ್ ಕೆ ನಗರ ಉಪ ಚುನಾವಣೆಯಲ್ಲಿ ದಶಕದ ನಂತರ ತಮಿಳುನಾಡು ಪ್ರಮುಖ ಪ್ರತಿಪಕ್ಷ ಡಿಎಂಕೆಗೆ ಬೆಂಬಲ ನೀಡುವುದಾಗಿ ಎಂಡಿಎಂಕೆ ಮುಖ್ಯಸ್ಥ ವೈಕೊ ಅವರು ಭಾನುವಾರ ಘೋಷಿಸಿದ್ದಾರೆ.
ಇಂದು ನಡೆದ ಪಕ್ಷದ ಉನ್ನತ ಮಟ್ಟದ ಸಭೆಯಲ್ಲಿ, ಮುಂಬರುವ ಉಪ ಚುನಾವಣೆಯಲ್ಲಿ ಡಿಎಂಕೆ ಬೆಂಬಲಿಸಲು ನಮ್ಮ ಪಕ್ಷ ನಿರ್ಧರಿಸಿದೆ ಎಂದು ವೈಕೊ ತಿಳಿಸಿದ್ದಾರೆ.
ತಮಿಳುನಾಡು ಜನರ ಹಿತಾಸಕ್ತಿ ಮತ್ತು ದ್ರಾವಿಡ ಚಳವಳಿಯನ್ನು ಪರಿಗಣಿಸಿ ಪಕ್ಷ ಈ ನಿರ್ಧಾರಕ್ಕೆ ಬಂದಿದೆ ಎಂದು ವೈಕೊ ವರದಿಗಾರರಿಗೆ ತಿಳಿಸಿದ್ದಾರೆ.
ಇದೇ ವೇಳೆ ಎಐಎಡಿಎಂಕೆ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವೈಕೊ, ಎಐಎಡಿಎಂಕೆಗೆ ಪಾಠ ಕಲಿಸುವ ಅಗತ್ಯ ಇಲ್ಲ. ಅವರು ಈಗಾಗಲೇ ಜನರ ನಂಬಿಕೆ ಕಳೆದುಕೊಂಡಿದ್ದಾರೆ ಎಂದರು. ಇನ್ನು ಬಿಜೆಪಿ ಹಿಂದೂತ್ವವನ್ನು ಮುಂದಿಟ್ಟುಕೊಂಡು ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.