ರಾಹುಲ್ ಗಾಂಧಿ ಪದೋನ್ನತಿ ಸಮರ್ಥನೆಗೆ ಮೊಘಲ್ ಉದಾಹರಣೆ ನೀಡಿದ ಮಣಿಶಂಕರ್ ಅಯ್ಯರ್!
ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದ್ದು, ಕಾಂಗ್ರೆಸ್ ನ ವಂಶಾಡಳಿತದ ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ.

Published On :
ನವದೆಹಲಿ: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದ್ದು, ಕಾಂಗ್ರೆಸ್ ನ ವಂಶಾಡಳಿತದ ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ. ಆದರೆ ರಾಹುಲ್ ಗಾಂಧಿ ಪದೋನ್ನತಿಯನ್ನು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇಂತಹದ್ದೇ ಸಮರ್ಥನೆಗೆ ಯತ್ನಿಸಿ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಎಡವಟ್ಟು ಮಾಡಿಕೊಂಡಿದ್ದಾರೆ.
ರಾಹುಲ್ ಗಾಂಧಿ ಅವರ ಪದೋನ್ನತಿಯನ್ನು ಸಮರ್ಥಿಸುವ ಭರದಲ್ಲಿ ಮಣಿಶಂಕರ್ ಅಯ್ಯರ್ ಮೊಘಲರ ವಂಶಾಡಳಿತವನ್ನು ಉದಾಹರಣೆಯಾಗಿ ನೀಡಿದ್ದಾರೆ. ರಾಹುಲ್ ಗಾಂಧಿ ಪದೋನ್ನತಿ ಕುರಿತ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ಮಣಿಶಂಕರ್ ಅಯ್ಯರ್, ಷಾ ಜಹಾನ್ ಜಹಂಗೀರ್ ಸ್ಥಾನಕ್ಕೆ ಬಂದಾಗ ಯಾವುದಾದರು ಚುನಾವಣೆ ನಡೆದಿತ್ತಾ? ಔರಂಗಜೇಬ್ ಷಾ ಜಹಾನ್ ಸ್ಥಾನಕ್ಕೆ ಬಂದಾಗ ಯಾವುದಾದರೂ ಚುನಾವಣೆ ನಡೆದಿತ್ತಾ? ಎಂದು ಪ್ರಶ್ನಿಸಿದ್ದಾರೆ. ರಾಜನ ಸಿಂಹಾಸನ ಅವರ ವಂಶದವರಿಗೇ ಸೇರಿದ್ದು ಎಂಬುದು ಎಲ್ಲರಿಗೂ ಗೊತ್ತಿದೆ ಆದರೆ ಪ್ರಜಾಪ್ರಭುತ್ವದಲ್ಲಿ ಚುನಾವಣೆ ನಡೆಯುತ್ತದೆ, ಪೂನಾವಾಲ ಅವರು ನಾಮಪತ್ರ ಸಲ್ಲಿಸಿ ಚುನಾವಣೆ ಎದುರಿಸಲು ಎಂದು ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.
ಗುಜರಾತ್ ಚುನಾವಣೆ ಪ್ರಚಾರದಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದು, ಮಣಿ ಶಂಕರ್ ಅಯ್ಯರ್ ಒಂದು ಕುಟುಂಬಕ್ಕೆ ನಿಷ್ಠೆ ತೋರುವುದರಲ್ಲಿ ಹಿಂದೇಟು ಹಾಕುವುದಿಲ್ಲ, ಹಾಗಾಗಿಯೇ ಅವರು ರಾಹುಲ್ ಗಾಂಧಿ ಪದೋನ್ನತಿ ಬಗ್ಗೆ ಮಾತನಾಡುತ್ತಾ ಔರಂಗಜೇಬ್ ಷಾ ಜಹಾನ್ ಸ್ಥಾನಕ್ಕೆ ಬಂದಾಗ ಯಾವುದಾದರೂ ಚುನಾವಣೆ ನಡೆದಿತ್ತಾ? ಎಂದು ಪ್ರಶ್ನಿಸಿದ್ದಾರೆ, ಕಾಂಗ್ರೆಸ್ ಗೆ ಔರಂಗಜೇಬ್ ರಾಜ್ ಸಿಕ್ಕಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ನಮಗೆ 125 ಕೋಟಿ ಭಾರತೀಯರೇ ಹೈಕಮಾಂಡ್ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Mani Shankar Aiyarಮಣಿ ಶಂಕರ್ ಅಯ್ಯರ್Rahul Gandhi’s elevationMughal Exampleರಾಹುಲ್ ಗಾಂಧಿ ಪದೋನ್ನತಿಮೊಘಲ್ ಉದಾಹರಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


