ದೇಶ

ಶಶಿ ಕಪೂರ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಸೇರಿ ಹಲವು ಗಣ್ಯರ ಸಂತಾಪ

ಬಾಲಿವುಡ್ ಖ್ಯಾತ ನಟ ಶಶಿಕಪೂರ್(79ವರ್ಷ) ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ....

ಶಶಿ ಕಪೂರ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಸೇರಿ ಹಲವು ಗಣ್ಯರ ಸಂತಾಪ
ಶಶಿ ಕಪೂರ್
Published On :
ಮುಂಬೈ: ಬಾಲಿವುಡ್ ಖ್ಯಾತ ನಟ ಶಶಿಕಪೂರ್(79ವರ್ಷ) ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಹಲವು ಗಣ್ಣಯರು ತೀವ್ರ ಸಂತಾಪ ಸೂಚಿಸಿದ್ದಾರೆ. 
ಶಶಿ ಕಪೂರ್ ಅವರ ಬಹುಮುಖ ಪ್ರತಿಭೆ ಎಂಬುದನ್ನು ಸಿನೆಮಾಗಳಲ್ಲಿ ಮತ್ತು ರಂಗಮಂದಿರದಲ್ಲಿ ಸಾಬೀತಾಗಿತ್ತು. ಅವರ ಅದ್ಭುತ ನಟನೆಯು ಮುಂದಿನ ಪೀಳಿಗೆಯ ನೆನಪಿನಲ್ಲಿ ಉಳಿಯುತ್ತದೆ. ಹಿರಿಯ ನಟನ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ನೀಡಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಭಾರತೀಯ ಚಿತ್ರೋದ್ಯಮದಲ್ಲಿ ಶಶಿ ಕಪೂರ್ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ರಾಷ್ಟ್ರಪತಿ ಕೋವಿಂದ್ ಅವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಗಣ್ಯರು ಬಾಲಿವುಡ್ ಹಿರಿಯ ನಟನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಶಶಿ ಕಪೂರ್ ಅವರು ಇಂದು ಸಂಜೆ 5.20ಕ್ಕೆ ಮುಂಬೈನ ಕೋಕಿಲಾ ಬೆನ್‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ನಾಳೆ ಬೆಳಗ್ಗೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಅವರ ಪುತ್ರ ರಾಜ್ ಕಪೂರ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.