ದೇಶ

ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಲಿರುವ ರಾಹುಲ್ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಡಿ.04 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಲಿರುವ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಡಿ.04 ರಂದು ನಾಮಪತ್ರ ಸಲ್ಲಿಸಲಿದ್ದಾರೆ. 
ರಾಹುಲ್ ಗಾಂಧಿ ಅವರ ಉಮೇದುವಾರಿಕೆಗೆ ಈಗಾಗಲೇ ಕರ್ನಾಟಕದ ಸಿಎಂ ಸಿದ್ದರಾಮಯ್ಯ, ಹಿಮಾಚಲ ಪ್ರದೇಶ ಸಿಎಂ ವೀರಭದ್ರ ಸಿಂಗ್, ಪುದುಚೆರಿಯ ಸಿಎಂ ವಿ ನಾರಾಯಣ ಸ್ವಾಮಿ, ಮೇಘಾಲಯದ ಮುಕುಲ್ ಸಂಗ್ಮ, ಮಿಜೋರಾಮ್ ನ ಲಾಲ್ ತನ್ಹಾವಾಲ ಸೇರಿದಂತೆ ಒಟ್ಟು ಆರು ರಾಜ್ಯಗಳ ಮುಖ್ಯಮಂತ್ರಿಗಳು ಬೆಂಬಲ ಸೂಚಿಸಿದ್ದಾರೆ. 
ಕಾಂಗ್ರೆಸ್ ನ ರಾಜ್ಯ ಅಧ್ಯಕ್ಷರುಗಳು, ಪದಾಧಿಕಾರಿಗಳು ಕಾಂಗ್ರೆಸ್ ಕೇಂದ್ರ ಕಚೇರಿಗೆ ತೆರಳಲಿದ್ದು ರಾಹುಲ್ ಗಾಂಧಿಗೆ ಬೆಂಬಲ ಸೂಚಿಸಲಿದ್ದಾರೆ, ರಾಹುಲ್ ಗಾಂಧಿ 10: 30 ಕ್ಕೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. 
ಕಾಂಗ್ರೆಸ್ ನ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆ ಸ್ವಪಕ್ಷೀಯ ನಾಯಕನೇ ಟೀಕಿಸಿದ್ದು ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ನಿಜವಾದ ಚುನಾವಣೆಯಲ್ಲ ಅದೊಂದು ಸೆಲೆಕ್ಷನ್ ಪ್ರಕ್ರಿಯೆ ಎಂದು ಮಹಾರಾಷ್ಟ್ರದ ಕಾಂಗ್ರೆಸ್ ಕಾರ್ಯದರ್ಶಿ ಶೆಹಜಾದ್ ಪೂನಾವಾಲ ಅಧ್ಯಕ್ಷ ಚುನಾವಣೆ ಕುರಿತು ಅತೃಪ್ತಿ ಹೊರಹಾಕಿದ್ದಾರೆ. ಚುನಾವಣೆಗೆ ಮತ ಚಲಾಯಿಸಲು ಹೋಗುತ್ತಿರುವವರು ಈ ಮೊದಲೇ ಫಿಕ್ಸ್ ಆಗಿದ್ದಾರೆ. ಇದೊಂದು ಪೂರ್ವನಿಯೋಜಿತ ಚುನಾವಣೆಯಾಗಿದೆ ಎಂದು ಶೆಹಜಾದ್ ಪೂನಾವಾಲ ಆರೋಪ ಮಾಡಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.