ದೇಶ

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ರಾಹುಲ್ ಗಾಂಧಿ ಏಕೈಕ ಅರ್ಹ ಅಭ್ಯರ್ಥಿ- ಚುನಾವಣಾ ಅಧಿಕಾರಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗುವುದು ಖಚಿತವಾಗಿದ್ದು, ಅಧ್ಯಕ್ಷೀಯ ಚುನಾವಣೆಯಲ್ಲಿ...

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ರಾಹುಲ್ ಗಾಂಧಿ ಏಕೈಕ ಅರ್ಹ ಅಭ್ಯರ್ಥಿ- ಚುನಾವಣಾ ಅಧಿಕಾರಿ
ರಾಹುಲ್ ಗಾಂಧಿ
Published On :
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗುವುದು ಖಚಿತವಾಗಿದ್ದು, ಅಧ್ಯಕ್ಷೀಯ ಚುನಾವಣೆಯಲ್ಲಿ ರಾಹುಲ್ ಗಾಂಧಿ ಏಕೈಕ ಅರ್ಹ ಅಭ್ಯರ್ಥಿ ಎಂದು ಮಂಗಳವಾರ ಚುನಾವಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿನ್ನೆ ರಾಹುಲ್ ಗಾಂಧಿ ಪರವಾಗಿ ಸಲ್ಲಿಕೆಯಾಗಿದ್ದ 89 ಪ್ರಸ್ತಾವನೆಗಳನ್ನು ಪರಿಶೀಲಿಸಿದ ಬಳಿಕ ಶ್ರೀ ರಾಹುಲ್ ಗಾಂಧಿ ಅವರು ಮಾತ್ರ ಅರ್ಹ ಅಭ್ಯರ್ಥಿಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಮುಲ್ಲಪಲ್ಯ ರಾಮಚಂದ್ರನ್ ಅವರು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರ ಪರವಾಗಿ ಒಟ್ಟು 89 ಪ್ರಸ್ತಾವನೆಗಳನ್ನು ಸ್ವೀಕರಿಸಿದ್ದು, ಆ ಎಲ್ಲಾ ಪ್ರಸ್ತಾವನೆಗಳು ಮಾನ್ಯವಾಗಿವೆ ಎಂದು ಅವರು ತಿಳಿಸಿದ್ದಾರೆ. ಇದರೊಂದಿಗೆ ಶತಮಾನದಷ್ಟು ಹಳೆಯದಾದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ 47 ವರ್ಷದ ರಾಹುಲ್ ಗಾಂಧಿ ಅವರು ಆಯ್ಕೆಯಾಗುವುದು ಖಚಿತವಾಗಿದ್ದು, ಡಿಸೆಂಬರ್ 19ರಂದು ಅಧಿಕೃತ ಘೋಷಣೆ ಹೊರಬೀಳಲಿದೆ.
ಈ ಹಿಂದೆ ಯುಪಿಎ ಸರ್ಕಾರದ ಅವಧಿಯಲ್ಲೇ ರಾಹುಲ್ ಗಾಂಧಿ ಪಟ್ಟಾಭಿಷೇಕಕ್ಕೆ ಸಿದ್ಧತೆ ನಡೆದಿತ್ತು. ಆದರೆ ನಂತರ ನಡೆದ ವಿವಿಧ ಚುನಾವಣೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ಕಾರಣ ಪಟ್ಟಾಭಿಷೇಕ ಮುಹೂರ್ತವನ್ನು ಮುಂದೂಡುತ್ತಲೇ ಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.