ಕಾಶ್ಮೀರ: ಅಮರನಾಥ ಯಾತ್ರೆ ದಾಳಿ ಯಲ್ಲಿ ಶಾಮೀಲಾಗಿದ್ದ ಮೂವರು ಉಗ್ರರ ಹತ್ಯೆ
ಅಮರನಾಥ ಯಾತ್ರಾರ್ಥಿಗಳ ಮೇಲೆ ದಾಳಿ ನಡೆಸಿದ್ದ ಮೂವರು ಉಗ್ರರನ್ನು ದಕ್ಷಿಣ ಕಾಶ್ಮೀರದಲ್ಲಿ ಹತ್ಯೆ ಮಾಡಲಾಗಿದೆ.

Published On :
ಶ್ರೀನಗರ: ಅಮರನಾಥ ಯಾತ್ರಾರ್ಥಿಗಳ ಮೇಲೆ ದಾಳಿ ನಡೆಸಿದ್ದ ಮೂವರು ಉಗ್ರರನ್ನು ದಕ್ಷಿಣ ಕಾಶ್ಮೀರದಲ್ಲಿ ಹತ್ಯೆ ಮಾಡಲಾಗಿದೆ.
ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಎನ್ ಕೌಂಟರ್ ನಿಂದ ತಪ್ಪಿಸಿಕೊಂಡಿದ್ದ ಮತ್ತೋರ್ವ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಡಿ.04 ರಂದು ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಉಗ್ರರು ಸೇನಾ ಬೆಂಗಾವಲು ಪಡೆ ಮೇಲೆ ಗುಂಡು ಹಾರಿಸಿದ್ದಾರೆ ಈ ವೇಳೆ ಎನ್ ಕೌಂಟರ್ ಪ್ರಾರಂಭವಾಗಿದ್ದು, ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ಗಾಯಗೊಂಡಿದ್ದಾರೆ.
ಡಿ.5 ರಂದು ಮಧ್ಯರಾತ್ರಿ 2 ಗಂಟೆಗೆ ಎನ್ ಕೌಂಟರ್ ಕಾರ್ಯಾಚರಣೆ ಮುಕ್ತಾಯಗೊಂಡಿದ್ದು ಮೂವರು ಉಗ್ರರರನ್ನು ಹತ್ಯೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


