ರೈತರ ಪರ ಹೋರಾಟ: ಮಹಾರಾಷ್ಟ್ರದಲ್ಲಿ ಬಿಜೆಪಿ ಹಿರಿಯ ನಾಯಕ ಯಶವಂತ್ ಸಿನ್ಹಾ ವಶಕ್ಕೆ
ಮಹಾರಾಷ್ಟ್ರದಲ್ಲಿ ರೈತರ ಪರ ಹೋರಾಟಕ್ಕಿಳಿದಿರುವ ಬಿಜೆಪಿ ಹಿರಿಯ ನಾಯಕ ಯಶವಂತ್ ಸಿನ್ಹಾ ಅವರನ್ನು ಪೊಲೀಸರು ಬಂಧಿಸಿದ್ದಾರೆ...

Published On :
ಮುಂಬೈ: ಮಹಾರಾಷ್ಟ್ರದಲ್ಲಿ ರೈತರ ಪರ ಹೋರಾಟಕ್ಕಿಳಿದಿರುವ ಬಿಜೆಪಿ ಹಿರಿಯ ನಾಯಕ ಯಶವಂತ್ ಸಿನ್ಹಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ವಿದರ್ಭ ಭಾಗದ ರೈತರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸಿನ್ಹಾ ಅವರು ಪ್ರತಿಭಟನೆ ನಡೆಸುತ್ತಿದ್ದರು. ಇದರಿಂದಾಗಿ ನಿನ್ನೆ ಸಂಜೆ 5.30ರ ಸುಮಾರಿಗೆ ಸಿನ್ಹಾ ಹಾಗೂ ಹಲವು ಪ್ರತಿಭಟನಾನಿರತರನ್ನು ವಶಕ್ಕೆ ಪಡೆದು ನಂತರ ರಾತ್ರಿ 9.50ರ ಸುಮಾರಿಗೆ ಬಿಡುಗಡೆ ಮಾಡಲಾಯಿತು.
ಬಿಡುಗಡೆ ನಂತರ ಪೊಲೀಸ್ ಠಾಣೆಯಿಂದ ತೆರಳಲು ನಿರಾಕರಿಸಿದ ಸಿನ್ಹಾ ರೈತರ ಬೇಡಿಕೆಗಳು ಈಡೇರುವವರೆಗೂ ಇಲ್ಲಿಂದ ಕದಲಲ್ಲ ಎಂದು ಹೇಳಿ ರಾತ್ರಿಯಿಡಿ ಇಲ್ಲೇ ಮಲಗಿದ್ದರು ಎಂದು ಪೊಲೀಸ್ ಅಧಿಕಾರಿ ರಾಕೇಶ್ ಕಲ್ಸಾಗರ ಹೇಳಿದ್ದಾರೆ.
ನನ್ನ ಹೋರಾಟ ರಾಜಕೀಯವಾಗಬಾರದು. ರೈತರಿಗೆ ಪರಿಹಾರ ಸಿಗಬೇಕು ಎಂಬುದೇ ನಮ್ಮ ಆಶಯ ಎಂದು ಯಶವಂತ್ ಸಿನ್ಹಾ ಹೇಳಿದ್ದಾರೆ. ಇತ್ತೀಚೆಗೆ ಸಿನ್ಹಾ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಜಿಎಸ್ಟಿ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುತ್ತಾ ಬಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


