ದೇಶ

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 25 ವರ್ಷ: ಅಯೋಧ್ಯೆಯಲ್ಲಿ ಕಟ್ಟೆಚ್ಚರ; ತೀವ್ರ ಭದ್ರತೆ

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಇಂದು 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ...

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ 25 ವರ್ಷ: ಅಯೋಧ್ಯೆಯಲ್ಲಿ ಕಟ್ಟೆಚ್ಚರ; ತೀವ್ರ ಭದ್ರತೆ
ಅಯೋಧ್ಯೆ ಸುತ್ತಮುತ್ತ ತೀವ್ರ ಭದ್ರತೆ ಕಾಯುತ್ತಿರುವ ಭದ್ರತಾ ಸಿಬ್ಬಂದಿ
Published On :
ಅಯೋಧ್ಯೆ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಇಂದು 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ.
ಭದ್ರತಾ ಪಡೆಗಳು ನಗರದ ಅಲ್ಲಲ್ಲಿ ಕಣ್ಗಾವಲು ಇರಿಸಿದ್ದು ನಗರವನ್ನು ಪ್ರವೇಶಿಸುವ ಮತ್ತು ಹೊರಹೋಗುವ ವ್ಯಕ್ತಿಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತದೆ.
ಮುಸಲ್ಮಾನರು ಈ ದಿನವನ್ನು ಕರಾಳ ದಿನ ಎಂದು ಭಾವಿಸುತ್ತಿದ್ದು, ಹಿಂದೂಗಳು ವಿಜಯದ ದಿನವೆಂದು ಸಂಭ್ರಮಾಚರಿಸುತ್ತಾರೆ ಎಂದು ಬಾಂಬು ವಿಲೇವಾರಿ ತಂಡದ ಕಮಾಂಡರ್ ಸುದ್ದಿಸಂಸ್ಥೆಗೆ ಹೇಳಿದ್ದಾರೆ.
ಅಯೋಧ್ಯೆ ಸುತ್ತಮುತ್ತ ಮೂಲೆ ಮೂಲೆಗಳಲ್ಲಿಯೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಬಾಂಬ್ ವಿಲೇವಾರಿ ತಂಡದ ಪಡೆಗಳು ಮತ್ತು ಭದ್ರತಾ ಸಿಬ್ಬಂದಿಗಳು ಅಲ್ಲಲ್ಲಿ ಕಾವಲು ಕಾಯುತ್ತಿದ್ದಾರೆ. ಪ್ರತಿ ಪ್ರದೇಶಗಳನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
1992ರ ಡಿಸೆಂಬರ್ 6ರಂದು ವಿಶ್ವ ಹಿಂದೂ ಪರಿಷತ್ ಮತ್ತು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಅಯೋಧ್ಯೆಗೆ ರ್ಯಾಲಿ ಹೋಗಿದ್ದರು. ಕರ ಸೇವಕರೆಂದು ಕರೆಯಲ್ಪಡುವ ಒಂದೂವರೆ ಲಕ್ಷಕ್ಕೂ ಅಧಿಕ ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗವಹಿಸಿದ್ದರು.
ಅಯೋಧ್ಯೆ ತಲುಪುತ್ತಿದ್ದಂತೆ ರ್ಯಾಲಿ ಹಿಂಸಾಚಾರಕ್ಕೆ ತಿರುಗಿತು. ಭದ್ರತಾ ಪಡೆಯನ್ನು ಬೇಧಿಸಿ ಅಯೋಧ್ಯೆಯಲ್ಲಿ 16ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದರು.
ಈ ಘಟನೆ ನಂತರ ದೇಶಾದ್ಯಂತ ಕೋಮು ಗಲಭೆ ತೀವ್ರವಾಗಿ ನಡೆದು ಸುಮಾರು 2,000 ಮಂದಿ ಪ್ರಾಣ ಕಳೆದುಕೊಂಡರು.
ಕರ ಸೇವಕರ ರ್ಯಾಲಿಯಲ್ಲಿ ಬಿಜೆಪಿ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಉಮಾ ಭಾರತಿ, ಮುರಳಿ ಮನೋಹರ ಜೋಷಿ ಮೊದಲಾದವರು ನೇತೃತ್ವ ವಹಿಸಿದ್ದರು. 
ಬಾಬ್ರಿ ಮಸೀದಿಯನ್ನು ಅಯೋಧ್ಯೆಯಲ್ಲಿ 1528ರಲ್ಲಿ ಮೊಗಲ್ ದೊರೆ ಬಾಬುರ್ ನಿರ್ಮಿಸಿದ್ದರು. ಆದರೆ ಇಲ್ಲಿ ಮೊದಲು ರಾಮ ದೇವಾಲಯವಿದ್ದು ಅದನ್ನು ಕೆಡವಿ ಮಸೀದಿ ನಿರ್ಮಿಸಲಾಯಿತು ಎಂದು ಹಿಂದೂ ಧರ್ಮೀಯರ ವಾದವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.