ದೇಶ

ಮಹಾರಾಷ್ಟ್ರ: ಎನ್ ಕೌಂಟರ್ ನಲ್ಲಿ ಐವರು ಮಹಿಳೆ ಸೇರಿ ಏಳು ನಕ್ಸಲರ ಹತ್ಯೆ

ಮಹಾರಾಷ್ಟ್ರದ ಜಿಂಗನೂರ್ ಅರಣ್ಯ ಪ್ರದೇಶದಲ್ಲಿ ಬುಧವಾರ ನಡದೆ ಗುಂಡಿನ ಕಾಳಗದಲ್ಲಿ ಐವರು ಮಹಿಳೆಯರು ಸೇರಿದಂತೆ...

ಮಹಾರಾಷ್ಟ್ರ: ಎನ್ ಕೌಂಟರ್ ನಲ್ಲಿ ಐವರು ಮಹಿಳೆ ಸೇರಿ ಏಳು ನಕ್ಸಲರ ಹತ್ಯೆ
ಸಾಂದರ್ಭಿಕ ಚಿತ್ರ
Published On :
ಗಡಿಚಿರೋಲಿ: ಮಹಾರಾಷ್ಟ್ರದ ಜಿಂಗನೂರ್ ಅರಣ್ಯ ಪ್ರದೇಶದಲ್ಲಿ ಬುಧವಾರ ನಡದೆ ಗುಂಡಿನ ಕಾಳಗದಲ್ಲಿ ಐವರು ಮಹಿಳೆಯರು ಸೇರಿದಂತೆ ಕನಿಷ್ಠ ಏಳು ಶಂಕಿತ ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಭದ್ರತಾ ಪಡೆ, ದಟ್ಟ ಅರಣ್ಯದಲ್ಲಿ ನಕ್ಸಲರ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡು ಹೊರ ಬಂದಿದ್ದು, ತಮ್ಮ ಮೇಲೆ ದಾಳಿ ನಡೆಸಿದ ಏಳು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಯಶಸ್ಸಿಯಾಗಿದ್ದಾರೆ.
ಅರಣ್ಯದಲ್ಲಿ ಇನ್ನು ಕೆಲ ನಕ್ಸಲರು ತಪ್ಪಿಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾವೋವಾದಿ ಗುಂಪು ಡಿಸೆಂಬರ್ 2-8ರ ವರೆಗೆ 'ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ(ಪಿಎಲ್ ಜಿಎ)ಯ ವಾರ್ಷಿಕೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಧನೊರಾ ಮತ್ತು ಭಮರಾಗಡ್ ಉಪ ಜಿಲ್ಲೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಿಂಸಾತ್ಮಕ ಚಟುವಟಿಕೆಗಳು ಉಲ್ಬಣಗೊಂಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.