ದೇಶ

ಶ್ರೀನಗರದಲ್ಲಿ ತ್ರಿವರ್ಣ ಧ್ವಜ ಹಾರಿಸಲು ತಡೆ: ಶಿವಸೇನೆ ಕಾರ್ಯಕರ್ತರ ಬಂಧನ!

ಶ್ರೀನಗರದ ಲಾಲ್ ಚೌಕ್ ನಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಲು ಯತ್ನಿಸಿದ ಶಿವಸೇನೆ ಕಾರ್ಯಕರ್ತರನ್ನು ತಡೆಯಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ.

ಶ್ರೀನಗರದಲ್ಲಿ ತ್ರಿವರ್ಣ ಧ್ವಜ ಹಾರಿಸಲು ತಡೆ: ಶಿವಸೇನೆ ಕಾರ್ಯಕರ್ತರ ಬಂಧನ!
ತ್ರಿವರ್ಣ ಧ್ವಜ
Published On :
ಶ್ರೀನಗರ: ಶ್ರೀನಗರದ ಲಾಲ್ ಚೌಕ್ ನಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಲು ಯತ್ನಿಸಿದ ಶಿವಸೇನೆ ಕಾರ್ಯಕರ್ತರನ್ನು ತಡೆಯಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ. 
ಘಂಟಾ ಘರ್ ಬಳಿ ಆಗಮಿಸಿದ ಶಿವಸೇನೆ ಕಾರ್ಯಕರ್ತರನ್ನು ಪೊಲೀಸರು ಮುಂಜಾಗೃತಾ ಕ್ರಮವಾಗಿ ಬಂಧಿಸಿದ್ದಾರೆ. ಶಿವಸೇನೆ ಕಾರ್ಯಕರ್ತರು ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ವಿರುದ್ಧ ವಾಗ್ದಾಳಿ ನಡೆಸಿದ್ದು, ಘೋಷಣೆ ಕೂಗಿದ್ದಾರೆ. ಅಬ್ದುಲ್ಲಾ ನೇತೃತ್ವದ ಪಕ್ಷ ಅಧಿಕಾರಕ್ಕೆ ಬರಬೇಕೆಂದರೆ ಕಾಶ್ಮೀರಿ ಪ್ರತ್ಯೇಕತಾವಾದಿಗಳ ಪರವಾಗಿ ಮಾತನಾಡುವುದನ್ನು ಬಿಡಬೇಕು ಎಂದು ಶಿವಸೇನೆ ಎಚ್ಚರಿಕೆ ನೀಡಿದೆ. 
ಬಂಧಿತ ಕಾರ್ಯಕರ್ತರನ್ನು ಕೋಟಿಭಾಗ್ ಪೊಲೀಸ್ ಠಾಣೆಗೆ ಕರೆದೊಯ್ದು ಕಾನೂನು ಪ್ರಕ್ರಿಯೆ ನಂತರ ಬಿಡುಗಡೆ ಮಾಡಲಾಗಿದೆ. ಪಾಕ್ ಆಕ್ರಮಿತ ಕಾಶ್ಮೀರವನ್ನು ಬಿಡಿ ಜಮ್ಮು-ಕಾಶ್ಮೀರದ ಲಾಲ್ ಚೌಕ್ ನಲ್ಲಿ ತ್ರಿವರ್ಣ ಧ್ವಜ ಹಾರಿಸಿ ನೋಡೋಣ ಎಂದು ಫಾರೂಕ್ ಅಬ್ದುಲ್ಲಾ ಸವಾಲು ಹಾಕಿದ್ದರು ಈ ಹಿನ್ನೆಲೆಯಲ್ಲಿ ಶಿವ ಸೇನೆ ಕಾರ್ಯಕರ್ತರು ಲಾಲ್ ಚೌಕ್ ನಲ್ಲಿ ತ್ರಿವರ್ಣ ಧ್ವಜ ಹಾರಿಸಲು ಯತ್ನಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.