ದೇಶ

ತೆಲಂಗಾಣ: ಒಳಚರಂಡಿ ಪೈಪ್ ನಲ್ಲಿ ಬಾಲಕಿ ಶವ ಪತ್ತೆ, ಅತ್ಯಾಚಾರದ ಶಂಕೆ

ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಿನ್ನೆಯಷ್ಟೇ ಅಪಹರಣಕ್ಕೊಳಗಾಗಿದ್ದ 6 ವರ್ಷದ ಬಾಲಕಿ ಇಂದು ಒಳಚರಂಡಿಯ ಪೈಪ್ ಲೈನ್ ನಲ್ಲಿ ಶವವಾಗಿ...

ತೆಲಂಗಾಣ: ಒಳಚರಂಡಿ ಪೈಪ್ ನಲ್ಲಿ ಬಾಲಕಿ ಶವ ಪತ್ತೆ, ಅತ್ಯಾಚಾರದ ಶಂಕೆ
ಸಾಂದರ್ಭಿಕ ಚಿತ್ರ
Published On :
ಹೈದರಾಬಾದ್: ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ನಿನ್ನೆಯಷ್ಟೇ ಅಪಹರಣಕ್ಕೊಳಗಾಗಿದ್ದ 6 ವರ್ಷದ ಬಾಲಕಿ ಇಂದು ಒಳಚರಂಡಿಯ ಪೈಪ್ ಲೈನ್ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮೇದಕ್ ಜಿಲ್ಲೆಯ ಮನೋಹರಬಾದ್ ಮಂಡಲ್ ನ ಮುತಿರೆಡ್ಡಿಪಾಳ್ಯದಲ್ಲಿ ವಾಸಿಸುತ್ತಿದ್ದ ಬಿಹಾರ ಮೂಲದ ಕಾರ್ಮಿಕರ ಪುತ್ರಿ ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದಳು. ನಿನ್ನೆ ಮಧ್ಯಾಹ್ನ ವ್ಯಕ್ತಿಯೊಬ್ಬ ಪೋಷಕರ ಹೆಸರು ಹೇಳಿ ಬಾಲಕಿಯನ್ನು ಶಾಲೆಯಿಂದ ಕರೆದೊಯ್ದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ಸಂಜೆ ಮನೆಗೆ ಬಾರದಿದ್ದಾಗಿ ಪೋಷಕರು ಪೊಲೀಸರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಬಾಲಕಿಗಾಗಿ ಶೋಧ ನಡೆಸುತ್ತಿದ್ದ ಪೊಲೀಸರಿಗೆ ಇಂದು ಮುತಿರೆಡ್ಡಿಪಾಳ್ಯದ ಹೊರವಲಯದಲ್ಲಿ ಶವ ಸಿಕ್ಕಿದೆ. 
ಪೊಲೀಸರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆಮಾಡಿರುವ ಶಂಕೆ ವ್ಯಕ್ತಪಡಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.