ಗುಜರಾತ್ ಚುನಾವಣೆ: ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧೆ
ಗುಜರಾತ್ ವಿಧಾನಸಭೆಯ ಎರಡನೇ ಹಂತದ ಚುನಾವಣೆಗೆ ಸ್ಪರ್ಧಿಸುತ್ತಿರುವ ಶೇಕಡಾ 21ರಷ್ಟು ಕಾಂಗ್ರೆಸ್...

Published On :
ನವದೆಹಲಿ: ಗುಜರಾತ್ ವಿಧಾನಸಭೆಯ ಎರಡನೇ ಹಂತದ ಚುನಾವಣೆಗೆ ಸ್ಪರ್ಧಿಸುತ್ತಿರುವ ಶೇಕಡಾ 21ರಷ್ಟು ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಶೇಕಡಾ 15ರಷ್ಟು ಬಿಜೆಪಿ ಅಭ್ಯರ್ಥಿಗಳು ಅಪರಾಧ ಹಿನ್ನೆಲೆಯವರು ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ವರದಿ ಹೇಳಿದೆ.
ಇಂದು ತನ್ನ ವರದಿ ಬಿಡುಗಡೆ ಮಾಡಿರುವ ಎಡಿಆರ್ ಗುಜರಾತ್ ಚುನಾವಣೆಯ ಎರಡನೇ ಹಂತದಲ್ಲಿ ಸ್ಪರ್ಧಿಸುತ್ತಿರುವ 851 ಮಂದಿ ಅಭ್ಯರ್ಥಿಗಳಲ್ಲಿ 822 ಅಭ್ಯರ್ಥಿಗಳ ಅಫಿಡವಿಟ್ಟನ್ನು ಪರಿಶೀಲಿಸಿದೆ.
ಪರಿಶೀಲಿಸಿದ 822 ಅಭ್ಯರ್ಥಿಗಳ ಪೈಕಿ 101 ಅಭ್ಯರ್ಥಿಗಳು ಅಂದರೆ ಶೇಕಡಾ 12ರಷ್ಟು ಮಂದಿ ತಮ್ಮ ವಿರುದ್ಧ ಕ್ರಿಮಿನಲ್ ಕೇಸುಗಳಿವೆ ಎಂದು ಘೋಷಿಸಿಕೊಂಡಿದ್ದಾರೆ. 64 ಅಭ್ಯರ್ಥಿಗಳು ಅಂದರೆ ಶೇಕಡಾ 8ರಷ್ಟು ಮಂದಿ ಗಂಭೀರ ಅಪರಾಧ ಪ್ರಕರಣಗಳಾದ ಕೊಲೆ, ಹತ್ಯೆಗೆ ಯತ್ನ, ಅಪಹರಣ, ಮಹಿಳೆಯರ ವಿರುದ್ಧ ಎಸಗಿದ ಅಪರಾಧಗಳ ತನಿಖೆ ಎದುರಿಸುತ್ತಿದ್ದಾರೆ ಎಂದು ಎಡಿಆರ್ ಹೇಳಿಕೆಯಲ್ಲಿ ತಿಳಿಸಿದೆ.
ಉಳಿದ 29 ಮಂದಿ ಅಭ್ಯರ್ಥಿಗಳ ಸಂಪೂರ್ಣ ಅಫಿದವಿತ್ತುಗಳು ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಕಾಣಿಸದಿರುವುದರಿಂದ ಅಥವಾ ಸರಿಯಾಗಿ ಸ್ಕ್ಯಾನ್ ಆಗದಿರುವುದರಿಂದ ವಿಶ್ಲೇಷಿಸಿಲ್ಲ.
ಎರಡನೇ ಹಂತದ ಚುನಾವಣೆಯಲ್ಲಿ ಸ್ಪರ್ಧಿಗಿಳಿದಿರುವ ಪ್ರಮುಖ ಪಕ್ಷಗಳ ಪೈಕಿ ಭಾರತೀಯ ಜನತಾ ಪಾರ್ಟಿಯ 86 ಅಭ್ಯರ್ಥಿಗಳಲ್ಲಿ ಶೇಕಡಾ 13ರಷ್ಟು ಮಂದಿ, ಕಾಂಗ್ರೆಸ್ ನ 88 ಅಭ್ಯರ್ಥಿಗಳಲ್ಲಿ ಶೇಕಡಾ 18ರಷ್ಟು ಮತ್ತು ಬಹುಜನ ಸಮಾಜ ಪಕ್ಷದ 74 ಅಭ್ಯರ್ಥಿಗಳಲ್ಲಿ ಶೇಕಡಾ 2ರಷ್ಟು ಅಭ್ಯರ್ಥಿಗಳು ತಮ್ಮ ವಿರುದ್ಧ ಗಂಭೀರ ಆರೋಪಗಳಿವೆ ಎಂದು ಘೋಷಿಸಿಕೊಂಡಿದ್ದಾರೆ.
ಎನ್ ಸಿಪಿಯ ಶೇಕಡಾ 11ರಷ್ಟು, ಆಪ್ ನ ಶೇಕಡಾ 14ರಷ್ಟು ಮತ್ತು 344 ಸ್ವತಂತ್ರ ಅಭ್ಯರ್ಥಿಗಳು ಕೂಡ ಅಪರಾಧ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವವರು ಎಂದು ಅಫಿದವಿತ್ತಿನಲ್ಲಿ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿCandidatesಅಭ್ಯರ್ಥಿಗಳುcriminal chargesಗುಜರಾತ್ ಚುನಾವಣೆGujarat Pollಅಪರಾಧ ಹಿನ್ನೆಲೆಯವರು
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


