ಗುಜರಾತ್ ಚುನಾವಣೆ: ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದ ಸ್ವಾಮೀಜಿ ಮೇಲೆ ಹಲ್ಲೆ
ಗುಜರಾತ್ ವಿಧಾನಸಭಾ ಚುನಾವಣೆಗೆ ಕಾವು ರಂಗೇರಿದ್ದು ಮತದಾನಕ್ಕೆ ಇನ್ನು ಎರಡು ದಿನ ಬಾಕಿ ಇರವಂತೆ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದ ಸ್ವಾಮಿ ನಾರಾಯಣ...

Published On :
ಜುನಾಗಢ: ಗುಜರಾತ್ ವಿಧಾನಸಭಾ ಚುನಾವಣೆಗೆ ಕಾವು ರಂಗೇರಿದ್ದು ಮತದಾನಕ್ಕೆ ಇನ್ನು ಎರಡು ದಿನ ಬಾಕಿ ಇರವಂತೆ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದ ಸ್ವಾಮಿ ನಾರಾಯಣ ಗುರುಕುಲದ ಅರ್ಚಕ ಸ್ವಾಮಿ ಭಕ್ತಿ ಪ್ರಸಾದ್ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಕಳೆದ ರಾತ್ರಿ ಬಿಜೆಪಿ ಅಭ್ಯರ್ಥಿ ಕಿರಿತ್ ಪಟೇಲ್ ಪರ ಭಕ್ತಿ ಪ್ರಸಾದ್ ಪ್ರಚಾರ ನಡೆಸುತ್ತಿದ್ದಾಗ ದುಷ್ಕರ್ಮಿಗಳು ಕಬ್ಬಿಣ ರಾಡ್ ಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಕೂಡಲೇ ಸ್ವಾಮೀಜಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು.
ಸದ್ಯ ಸ್ವಾಮೀಜಿಯ ಆರೋಗ್ಯ ಸಹಜ ಸ್ಥಿತಿಯಲ್ಲಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಜಾಲ ಬೀಸಿದ್ದಾರೆ.
ಇನ್ನು ಹಲ್ಲೆಗೆ ಸಂಬಂಧಿಸಿದಂತೆ ಮಾತನಾಡಿರುವ ಸ್ವಾಮಿ ಭಕ್ತಿ ಪ್ರಸಾದ್ ಅವರು ನನ್ನ ಮೇಲೆ ನಡೆದ ಹಲ್ಲೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಆರೋಪಿಸಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆಗೆ ಡಿಸೆಂಬರ್ 9ರಂದು ಮೊದಲ ಹಂತದ ಮತದಾನ ನಡೆಯಲಿದ್ದು ಡಿಸೆಂಬರ್ 14ರಂದು ಎರಡನೇ ಹಂತದ ಮತದಾನ ನಡೆಯಲಿದ್ದು ಡಿಸೆಂಬರ್ 18ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


