ನಿತಾರಿ ಸರಣಿ ಹಂತಕರಿಗೆ ಗಲ್ಲು ಶಿಕ್ಷೆ
ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿತಾರಿ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮೋನಿಂದರ್ ಸಿಂಗ್ ಪಾಂಧೇರ್ ಹಾಗೂ ಆತನ ಮನೆ...

Published On :
ಘಾಜಿಯಾಬಾದ್: ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿತಾರಿ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮೋನಿಂದರ್ ಸಿಂಗ್ ಪಾಂಧೇರ್ ಹಾಗೂ ಆತನ ಮನೆ ಸಹಾಯಕ ಸುರೀಂದರ್ ಕೊಲಿಗೆ ಸಿಬಿಐ ವಿಶೇಷ ನ್ಯಾಯಾಲಯ 16 ಕೊಲೆಗಳ ಪೈಕಿ 9ನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದೆ.
2006ರಲ್ಲಿ ಮನೆ ಕೆಲಸದಾಕೆ 25 ವರ್ಷದ ಅಂಜಲಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಪಿಕೆ ತಿವಾರಿ ಅವರು ಗಲ್ಲು ಶಿಕ್ಷೆ ವಿಧಿಸಿದ್ದಾರೆ.
ನಿತಾರಿ ಸರಣಿ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಅದಾಗಲೇ ಎರಡು ಪ್ರಕರಣಗಳಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಇನ್ನು ಏಳು ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು ಆ ಪ್ರಕರಣಗಳ ತೀರ್ಪು ಏನಾಗಲಿದೆ ಎಂದು ಕಾದು ನೋಡಬೇಕು.
2006ರ ಅಕ್ಟೋಬರ್ 12ರಂದು ಅಂಜಲಿ ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಾಗಿತ್ತು. ದೂರಿನನ್ವಯ ಡಿಸೆಂಬರ್ 29ರಂದು ಪೊಲೀಸರು ಸುರೀಂದರ್ ಕೊಲಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ನಿತಾರಿ ಸರಣಿ ಕೊಲೆಗಳು ಬಯಲಿಗೆ ಬಂದಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CBI Courtಸಿಬಿಐ ನ್ಯಾಯಾಲಯSurendra KoliManinder Singh PandherNithari killingsಮೋನಿಂದರ್ ಸಿಂಗ್ ಪಾಂಧೇರ್ಸುರೀಂದರ್ ಕೊಲಿನಿತಾರಿ ಸರಣಿ ಕೊಲೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


