ಕಾಂಗ್ರೆಸ್ ವರ್ಚಸ್ಸಿಗೆ ಧಕ್ಕೆಯಾಗಿದ್ದರೆ ಶಿಕ್ಷೆ ಎದುರಿಸಲು ನಾನು ಸಿದ್ಧ: ಮಣಿಶಂಕರ್ ಅಯ್ಯರ್
ನನ್ನ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದ್ದರೆ ಯಾವುದೇ ರೀತಿಯ ಶಿಕ್ಷೆ ಎದುರಿಸಲು ಸಿದ್ಧ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಅವರು ಶುಕ್ರವಾರ ಹೇಳಿದ್ದಾರೆ.

Published On :
ನವದೆಹಲಿ: ನನ್ನ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದ್ದರೆ ಯಾವುದೇ ರೀತಿಯ ಶಿಕ್ಷೆ ಎದುರಿಸಲು ಸಿದ್ಧ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಅವರು ಶುಕ್ರವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ 'ನೀಚ ವ್ಯಕ್ತಿ ' ಹೇಳಿಕೆ ಸಂಬಂಧ ಭುಗಿಲೆದ್ದಿರುವ ಹಿನ್ನಲೆಯಲ್ಲಿ ಪ್ರಸ್ತುತ ಕಾಂಗ್ರೆಸ್ ಪಕ್ಷದಿಂದ ಅಮಾನತಾಗಿರುವ ಮಾಜಿ ಕೇಂದ್ರ ಸಚಿವ ಮಣಿ ಶಂಕರ್ ಅವರು ಇದೇ ಮೊದಲ ಬಾರಿಗೆ ವಿವಾಧ ಸಂಬಂಧ ಮಾತನಾಡಿದ್ದು, ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದ್ದರೆ ಯಾವುದೇ ಶಿಕ್ಷೆಗೂ ತಾವು ಸಿದ್ಧ ಎಂದು ಹೇಳಿದ್ದಾರೆ.
"ನನ್ನ ಹೇಳಿಕೆ ಯಾವುದೇ ವಿವಾದ ಸೃಷ್ಟಿಸುವ ಸಂಬಂಧ ನೀಡಿದ್ದಾಗಿರಲಿಲ್ಲ. ಆದರೂ ನನ್ನ ಹೇಳಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದ್ದರೆ ನಾನು ಪಕ್ಷ ನೀಡುವ ಯಾವುದೇ ರೀತಿಯ ಶಿಕ್ಷೆಯನ್ನು ಸ್ವೀಕರಿಸುತ್ತೇನೆ, ಕಾಂಗ್ರೆಸ್ ಪಕ್ಷ ನನಗೆ ಅಗತ್ಯಕ್ಕಿಂತ ಮೀರಿದ್ದನ್ನು ಕೊಟ್ಟಿದೆ. ನನ್ನಿಂದಾಗಿ ಪಕ್ಷಕ್ಕೆ ಹಿನ್ನಡೆಯಾಗುವುದು ನನಗಿಷ್ಟವಿಲ್ಲ ಎಂದು ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿCongressಕಾಂಗ್ರೆಸ್New DelhiMani Shankar Aiyarಮಣಿಶಂಕರ್ ಅಯ್ಯರ್Gujarat election 2017ಗುಜರಾತ್ ಚುನಾವಣೆ 2017
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


