ಗುಜರಾತ್ ಮತದಾನ: ಕೆಲವು ಭಾಗಗಳಲ್ಲಿ ಇವಿಎಂ ದೋಷ, ಉಳಿದ ಭಾಗಗಳಲ್ಲಿ ಚುರುಕಿನ ಮತದಾನ
ಗುಜರಾತ್ ವಿಧಾನಸಭೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನದ ವರೆಗೆ ಶೇ.32 ಕ್ಕೂ ಹೆಚ್ಚು ಮತದಾನ ನಡೆದಿದೆ.

Published On :
ಗಾಂಧಿನಗರ: ಗುಜರಾತ್ ವಿಧಾನಸಭೆಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನದ ವರೆಗೆ ಶೇ.32 ಕ್ಕೂ ಹೆಚ್ಚು ಮತದಾನ ನಡೆದಿದೆ.
ಕೆಲವು ಭಾಗಗಳಲ್ಲಿ ಇವಿಎಂ ಗಳಲ್ಲಿ ದೋಷ ಕಂಡುಬಂದಿದ್ದು, ಆದರೆ ಬಹುತೇಕ ಪ್ರದೇಶಗಳಲ್ಲಿ ಮತದಾನ ಚುರುಕಿನಿಂದ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ತಮ್ಮ ಹಕ್ಕು ಚಲಾವಣೆ ಮಾಡುತ್ತಿದ್ದಾರೆ. 89 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಇವಿಎಂ ಗಳಲ್ಲಿ ದೋಷ ಕಂಡುಬರುತ್ತಿರುವ ವರದಿಗಳು ಹೆಚ್ಚಾಗುತ್ತಿವೆ. ಅಮ್ರೇಲಿಯಲ್ಲಿ ಶೇ.32 ರಷ್ಟು ಮತದಾನ, ಮೋಬ್ರಿಯಲ್ಲಿ ಶೇ.33 ರಷ್ಟು, ರಾಜ್ ಕೋಟ್ ನಲ್ಲಿ ಶೇ.35 ರಷ್ಟು, ಜಮ್ನಗರ್-ಶೇ.32 ಕಛ್ ನಲ್ಲಿ ಶೇ.29, ಪೋರ್ಬಂದರ್ ನಲ್ಲಿ ಶೇ.28, ಗಿರ್ ಸೋಮ್ನಾಥ್-ಶೇ.30 ರಷ್ಟು ಮತದಾನವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


