ಪ್ರಧಾನಿ ಮೋದಿ ಭಾಷಣದಲ್ಲಿ 'ಅಭಿವೃದ್ಧಿ' ಪದ ಕಾಣೆಯಾಗಿರುವುದೇಕೆ?: ರಾಹುಲ್ ಗಾಂಧಿ
ಗುಜರಾತ್ ಚುನಾವಣಾ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಪದದ ಬಳಕೆ ಮಾಡದೇ ಇರಲು ಕಾರಣವೇನು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

Published On :
ನವದೆಹಲಿ: ಗುಜರಾತ್ ಚುನಾವಣಾ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಪದದ ಬಳಕೆ ಮಾಡದೇ ಇರಲು ಕಾರಣವೇನು ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಗುಜರಾತ್ ಚುನಾವಣೆಯನ್ನು ಹಿನ್ನಲೆಯಾಗಿಟ್ಟುಕೊಂಡು ಮಾತನಾಡಿದ ರಾಹುಲ್ ಗಾಂಧಿ ಗುಜರಾತ್ ನಲ್ಲಿ 22 ವರ್ಷಗಳ ಕಾಲ ಬಿಜೆಪಿ ಆಡಳಿತ ನಡೆಸಿದೆ. ಆಡಳಿತ ನಡೆಸಿದ ಎಂದ ಮೇಲೆ ಅಭಿವೃದ್ಧಿಯಾಗಿರಲೇಬೇಕು. ಅಭಿವೃದ್ಧಿಯಾಗಿದ್ದರೆ ಅದನ್ನು ಚುನಾವಣಾ ಪ್ರಚಾರಕ್ಕೆ ಪ್ರಧಾನಿ ಮೋದಿ ಏಕೆ ಬಳಕೆ ಮಾಡುತ್ತಿಲ್ಲ ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.
ಈ ಹಿಂದೆ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ 10 ಪ್ರಶ್ನೆಗಳನ್ನು ಕೇಳಿದ್ದೆ. ಆದರೆ ಈ ವರೆಗೂ ಆ 10 ಪ್ರಶ್ನೆಗಳ ಪೈಕಿ ಒಂದಕ್ಕೂ ನನಗೆ ಉತ್ತರ ದೊರೆತಿಲ್ಲ. ಗುಜರಾತ್ ಚುನಾವಣೆಯ ಮೊದಲ ಹಂತದ ಮಾತದಾನವೇ ಮುಕ್ತಾಯದತ್ತ ಸಾಗಿದ್ದರೂ ಇನ್ನೂ ಪ್ರಣಾಳಿಕೆ ಬಿಡುಗಡೆಯಾಗಿಲ್ಲ. ದೇಶಾದ್ಯಂತ ಗುಜರಾತ್ ಮಾದರಿ ಅಭಿವೃದ್ಧಿ ಕುರಿತು ಮಾತನಾಡುವ ಪ್ರಧಾನಿ ಮೋದಿ, ಗುಜರಾತ್ ನೆಲದಲ್ಲೇ ಅ ಬಗ್ಗೆ ಮಾತನಾಡುತ್ತಿಲ್ಲ ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiPM Modiಪ್ರಧಾನಿ ಮೋದಿRahul Gandhiರಾಹುಲ್ ಗಾಂಧಿGujarat election 2017ಗುಜರಾತ್ ಚುನಾವಣೆ 2017
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


